ಎ.16ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಎ.೧೬ರಿಂದ ೨೦ರವರೆಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಎ.೧೬ರಂದು ಪುತ್ತೂರು ತಾಲೂಕಿನ ಪಾಣಾಜೆ, ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ. ಎ.೨೦ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟನೆ ತಿಳಿಸಿದೆ.
Next Story





