Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ...

ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ13 April 2022 8:15 PM IST
share
ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ ಮತ್ತು ಮಲೇರಿಯಾ ರೋಗ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಅಧಿಕವಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳು ಸಂತಾನೋತ್ಪತ್ತಿಗೊಳ್ಳುವುದರೊಂದಿಗೆ ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್, ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಹರಡುತ್ತವೆ ಎಂದರು.

ಸೊಳ್ಳೆ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕ ರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.

ಬಹು ಮಹಡಿ ಕಟ್ಟಡಗಳ ಮೇಲ್ಛಾವಣಿಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ತೆರೆದಿಟ್ಟಿರುವ ಹಿನ್ನೆಲೆಯಲ್ಲಿ ಅವು ಸೊಳ್ಳೆಗಳ ಉತ್ಪತಿ ತಾಣಗಳಾಗಿವೆ. ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಇವುಗಳ ಪರಿವೀಕ್ಷಣೆ ಮಾಡಿ, ಸಂಬಂಧಪಟ್ಟವರಿಗೆ ಇವುಗಳ ನಿಯಂತ್ರಣಕ್ಕೆ ಸೂಚನೆ ನೀಡುವುದು ಸೂಕ್ತ ಎಂದರು.

ಮಲೇರಿಯಾ, ಡೆಂಗ್ ರೋಗಗಳು ಹೆಚ್ಚು ಕಂಡುಬರುವ ಪ್ರದೇಶಗಳನ್ನು ಗುರುತಿಸುವುದರೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಗೆ ಕಟ್ಟಡ ನಿರ್ಮಾಣ ಹಾಗೂ ಮೀನುಗಾರಿಕೆ ಸೇರಿದಂತೆ ಇತರ  ಕಾರ್ಯಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರು ಹಾಗೂ ಪ್ರವಾಸಿ ತಾಣ ಗಳನ್ನು ವೀಕ್ಷಿಸಲು ಸಹ ಹೆಚ್ಚು ಜನರು ಹೊರಗಿನಿಂದ ಬರುತ್ತಾರೆ. ಹಾಗಾಗಿ ಇದರಿಂದ ರೋಗಗಳು ಹರಡುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಎಚ್ಚರ ವಹಿಸುವುದು ಅಗತ್ಯ ಎಂದರು.

ಡೆಂಗ್, ಮಲೇರಿಯಾ, ಕೀಟಜನ್ಯ ರೋಗಗಳ ಸಾಮಾನ್ಯ ಲಕ್ಷಣಗಳು ಕಂಡು ಬಂದವರ ಆರೋಗ್ಯ ತಪಾಸಣೆ ನಡೆಸಿ, ರೋಗಗಳನ್ನು ಗುರುತಿಸಿ, ಚಿಕಿತ್ಸೆ ನೀಡುವ ಮೂಲಕ ರೋಗ ಹರಡುವುದನ್ನು ತಡೆಯಲು ಸಾಧ್ಯ ಎಂದರು.

ಹಿಂದಿನ ವರ್ಷಗಳಲ್ಲಿ ಮಲೇರಿಯಾ, ಡೆಂಗ್ ರೋಗ ನಗರ ಪ್ರದೇಶಗಳಲ್ಲಿ ಹಾಗೂ ಕೊಲ್ಲೂರು ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಇವುಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ವಹಿಸಿ ಈ ಬಾರಿ ಪ್ರಕರಣಗಳು ವರದಿ ಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X