ಎ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಸಂಘಟನೆ ಗಳು ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನಾಚರಣೆ ಪ್ರಯುಕ್ತ ಎ.14ರಂದು ಬೆಳಗ್ಗೆ ೯:೩೦ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ೧೦ ಗಂಟೆಗೆ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





