ಮುಸ್ಲಿಂ ಮಹಿಳೆಯರನ್ನು ಬಲಾತ್ಕಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ಭಜರಂಗ ಮುನಿ ಬಂಧನ; ವರದಿ

Photo: Twitter
ಲಕ್ನೋ: ಕಳೆದ ವಾರ ಉತ್ತರ ಪ್ರದೇಶದ ಸೀತಾಪುರದಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಸಾರ್ವಜನಿಕವಾಗಿ ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದ ಭಜರಂಗ ಮುನಿ ದಾಸ್ ಎಂಬಾತನನ್ನು ಬಂಧಿಸಲಾಗಿದೆ ಎಂದು freepressjournal.in ವರದಿ ಮಾಡಿದೆ.
ಅತ್ಯಚಾರದ ಬೆದರಿಕೆ ಹಾಕುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆದ ನಂತರ ಆತನ ಬಂಧನವಾಗಿದೆ.
ಏಪ್ರಿಲ್ 7 ರಂದು, ಮುನಿ ದಾಸ್ ಮುಸ್ಲಿಂ ಸಮುದಾಯದ ವಿರುದ್ಧ "ಅತ್ಯಾಚಾರ ಬೆದರಿಕೆ" ನೀಡುವ ದ್ವೇಷ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ಉತ್ತರ ಪ್ರದೇಶ ಪೊಲೀಸರು ಸೀತಾಪುರ ಜಿಲ್ಲೆಯ ಮಸೀದಿಯೊಂದರ ಹೊರಗೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಭಜರಂಗ್ ಮುನಿ ಮುಸ್ಲಿಂ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
TRIGGER WARNING!
— Mohammed Zubair (@zoo_bear) April 7, 2022
A Mahant in front of a Masjid in the presence of Police personals warns that He would K!dnap Muslim Women and ₹@pe them in Open.
According to the locals near Sheshe wali Masjid, Khairabad, Sitapur. This happened on 2nd Apr 2022, 2 PM. @sitapurpolice @Uppolice pic.twitter.com/wkBNLnqUW0