‘ಸಪ್ತಪದಿ' ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮರು ಚಾಲನೆ

ಬೆಂಗಳೂರು, ಎ. 13: ಕೋವಿಡ್ ಸೋಂಕಿನ ಹಿನ್ನಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಮುಜರಾಯಿ ಇಲಾಖೆಯ ಉಚಿತ ಸಾಮೂಹಿಕ ವಿವಾಹ ‘ಸಪ್ತಪದಿ' ಕಾರ್ಯಕ್ರಮವನ್ನು ಮರುಚಾಲನೆ ನೀಡಲು ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದನ್ನು ತಪ್ಪಿಸಲು ಉಚಿತ ‘ಸಪ್ತಪದಿ ಸಾಮೂಹಿಕ ವಿವಾಹ' ಯೋಜನೆಯನ್ನು ಪ್ರಾರಂಭಿಸಿತ್ತು. ವಧು-ವರನಿಗೆ ಉಡುಗೆ, ಬಂಗಾರದ ಉಡುಗೊರೆ ನೀಡುವ ಜೊತೆಗೆ, ಎರಡೂ ಕಡೆಯ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿಯೇ ಮಾಡಲಿದೆ.
ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯದ ‘ಎ' ದರ್ಜೆಯ ದೇವಸ್ಥಾನಗಳಲ್ಲಿ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ‘ಸಪ್ತಪದಿ' ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ಆದೇಶಿಸಲಾಗಿದೆ. ಎ.28 ಮತ್ತು ಮೇ 11 ಮತ್ತು 25 ರಂದು ಆಯ್ದ ದೇವಸ್ಥಾನಗಳಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
Next Story





