ಕಾಸರಗೋಡಿನಲ್ಲಿ ಭಾರೀ ಗಾಳಿ ಮಳೆ; ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಮರ
![ಕಾಸರಗೋಡಿನಲ್ಲಿ ಭಾರೀ ಗಾಳಿ ಮಳೆ; ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಮರ ಕಾಸರಗೋಡಿನಲ್ಲಿ ಭಾರೀ ಗಾಳಿ ಮಳೆ; ಚಲಿಸುತ್ತಿದ್ದ ರಿಕ್ಷಾದ ಮೇಲೆ ಉರುಳಿಬಿದ್ದ ಮರ](https://www.varthabharati.in/sites/default/files/images/articles/2022/04/14/331661-1649903293.jpeg)
ಕಾಸರಗೋಡು : ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಉರುಳಿ ಬಿದ್ದ ಘಟನೆ ಕುಂಬಳೆ ಮೊಗ್ರಾಲ್ ಸಮೀಪ ಬುಧವಾರ ರಾತ್ರಿ ನಡೆದಿದೆ.
ಗಾಳಿಯ ಅಬ್ಬರಕ್ಕೆ ಹಲವೆಡೆ ಮರಗಳು ಬಿದ್ದಿವೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಗೊಂಡಿದೆ. ಬಹುತೇಕ ಕಡೆಗಳಲ್ಲಿ ರಾತ್ರಿ ಯಿಂದ ವಿದ್ಯುತ್ ಮೊಟಕುಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ ಕುಂಬಳೆ ಮೊಗ್ರಾಲ್ ಸಮೀಪ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಮರ ಉರುಳಿ ಬಿದ್ದ ಘಟನೆ ನಡೆದಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಮರ ಉರುಳಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಹಲವು ಕಡೆಗಳಲ್ಲಿ ಕೃಷಿ ಹಾನಿಯೂ ಉಂಟಾಗಿದೆ ಎಂದು ತಿಳಿದುಬಂದಿದೆ.
Next Story