ಸಂವಿಧಾನದ ತಳಹದಿಯ ಪ್ರಜಾಪ್ರಭುತ್ವ ಜಗತ್ತಿಗೆ ಮಾದರಿ: ಸಚಿವ ಸುನಿಲ್ ಕುಮಾರ್
ಡಾ.ಅಂಬೇಡ್ಕರ್ ಜನ್ಮ ದಿನಾಚರಣೆ

ಮಂಗಳೂರು : ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ತಳಹದಿಯ ಪ್ರಜಾಪ್ರಭುತ್ವ ಜಗತ್ತಿಗೆ ಮಾದರಿಯಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಅಭಿಪ್ರಾಯಿಸಿದ್ದಾರೆ.
ಡಾ.ಅಂಬೇಡ್ಕರ್ ಅವರ 131ನೆ ಜನ್ಮ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಧಾನಿ ಮೋದಿಯವರು ಡಾ. ಅಂಬೇಡ್ಕರ್ ಅವರ ಪಂಚ ತೀರ್ಥಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರಕಾರವು ದೀನ ದಲಿತರ ಅಭಿವೃದ್ಧಿಯ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಕಮಿಷನರ್ ಶಶಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವಣೆ, ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.
ಮೀನುಗಾರಿಕಾ ಕಾಲೇಜಿನ ಡೀನ್ ಡಾ. ಶಿವಕುಮಾರ್ ಮಗದ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ಧಲಿಂಗೇಶ ಬೇವಿನಕಟ್ಟೆ ಸ್ವಾಗತಿಸಿದರು.