ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ನಳಿನ್ ಕುಮಾರ್

ನಳಿನ್ ಕುಮಾರ್ ಕಟೀಲ್
ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸರಕಾರ ತನಿಖೆ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಪಕ್ಷ ಮತ್ತು ಸರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಆತ್ಮಹತ್ಯೆ ಮಾಡಿದವರದ್ದು ವಾಟ್ಸ್ಆ್ಯಪ್ ಸಂದೇಶವೇ ಹೊರತು, ಡೆತ್ ನೋಟ್ ಅಲ್ಲ. ಎಲ್ಲವನ್ನೂ ಪರಿಶೀಲಿಸಿ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ಹಿಂದಿನ ಎಲ್ಲ ವಿಚಾರವನ್ನು ತನಿಖೆ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಗೆ 2-3 ದಿನ ಬೇಕಾಗಬಹುದು. ನಂತರ ಸತ್ಯಾಸತ್ಯತೆ ಕಂಡು ಕ್ರಮ ಕೈಗೊಳ್ಳಲಾಗುವುದು ಎಂದು ನಗರದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದರು
Next Story