Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹನಾ ಗುಣಗಳಿಂದ ಶಾಂತಿಯುತ ಸಮಾಜ...

ಸಹನಾ ಗುಣಗಳಿಂದ ಶಾಂತಿಯುತ ಸಮಾಜ ನಿರ್ಮಾಣ: ಸಚಿವ ಅಂಗಾರ

ವಾರ್ತಾಭಾರತಿವಾರ್ತಾಭಾರತಿ14 April 2022 7:19 PM IST
share
ಸಹನಾ ಗುಣಗಳಿಂದ ಶಾಂತಿಯುತ ಸಮಾಜ ನಿರ್ಮಾಣ: ಸಚಿವ ಅಂಗಾರ

ಉಡುಪಿ : ಯಾವುದೇ ಮತ, ಪಂಗಡ, ಸಮುದಾಯ, ಪಂಥಗಳ ಆಚರಣೆಯಲ್ಲಿ ಭಗವಾನ್ ಮಹಾವೀರರು ತಿಳಿಸಿದ ಅಹಿಂಸೆ ಮತ್ತು ಸಹನಾ ಗುಣಗಳನ್ನು ಪ್ರತಿಯೊಬ್ಬರೂ ಪಾಲಿಸಿದ್ದಲ್ಲಿ, ಸಮಾಜ ಹಾಗೂ ದೇಶದಲ್ಲಿ ಶಾಂತಿಯುತ ವಾತಾವರಣ ಇರಲಿದೆ  ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಅಂಗಾರ ಹೇಳಿದ್ದಾರೆ. 

ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ  ವತಿ ಯಿಂದ ಆಯೋಜಿಸಲಾದ ಭಗವಾನ್ ಮಹಾವೀರ ಜಯಂತಿ ಆಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ಯಾವುದೇ  ಮತ, ಪಂಗಡ, ಧರ್ಮಗಳ ಆಚರಣೆಯ ಮೂಲ ಉದ್ದೇಶ ಮುಕ್ತಿ ಪಡೆಯುವುದಾಗಿದೆ. ಮುಕ್ತಿ ಪಡೆಯುವ ಹಾದಿಯಲ್ಲಿ  ಅಹಿಂಸೆ ಮತ್ತು ಸಹನಾ ಗುಣಗಳು ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ. ಅಹಿಂಸೆ ಯನ್ನು ಹೊರತುಪಡಿಸಿ ಪಡೆಯುವ ಯಾವುದೇ ಸಾಧನೆಯಿಂದ  ದೊರೆಯುವ ನೆಮ್ಮದಿ ಕೇವಲ ತಾತ್ಕಾಲಿಕ ವಾಗಿದೆ. ಮಾನವ ಬದುಕಿಗೆ ಪ್ರೇರಣೆಯಾಗುವ ಅನೇಕ ಗುಣಗಳನ್ನು ಭಗವಾನ್ ಮಹಾವೀರರು ತಮ್ಮ ಸಂದೇಶದಲ್ಲಿ ನೀಡಿದ್ದು, ಇದನ್ನು ಎಲ್ಲರೂ ಅರಿತು, ಪಾಲಿಸಿ, ತಮ್ಮ ಮುಂದಿನ ಪೀಳಿಗೆಗೂ ಸಹ ತಿಳಿಸುವ ಕೆಲಸವಾಗಬೇಕು ಎಂದರು.

ಭಗವಾನ್ ಮಹಾವೀರರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದ ಉದ್ಯಾವರ ಎಸ್.ಡಿ.ಎಂ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾದ್ಯಾಪಕ ಡಾ.ಅರ್ಹಂತ ಕುಮಾರ್ ಮಾತನಾಡಿ, ಜೈನಧರ್ಮ ಎಂಬುದು ವೈಜ್ಞಾನಿಕ ಶಾಸ್ತ್ರ ಮತ್ತು ಅನ್ಯ ಜೀವಿಗಳಿಗೆ ಹಿಂಸಿಸದೇ ಶಿಸ್ತಿನಿಂದ ಬದುಕುವ ವಿಧಾನವಾಗಿದೆ ಎಂದರು.

ಭಗವಾನ್ ಮಹಾವೀರರು ಇವುಗಳ ಆಚರಣೆ ಜೊತೆಗೆ  ಇಂದ್ರಿಯ ಮತ್ತು ಮನಸ್ಸನ್ನು ನಿಗ್ರಹಿಸಿ ಅತ್ಯಂತ ಉನ್ನತ ಸ್ಥಾನಕ್ಕೇರಿದ ಜೈನ ಧರ್ಮದ ಕೊನೆಯ ತೀರ್ಥಂಕರರಾಗಿದ್ದಾರೆ. ಅವರು ತಿಳಿಸಿದ ಮೂರು ಸಂದೇಶಗಳಾದ ಅಹಿಂಸೆ, ಅಪರಿಗ್ರಹ ಮತ್ತು ಅನೇಕಾಂತ ಸಿದ್ದಾಂತಗಳ ಆಚರಣೆಯಿಂದ ಎಲ್ಲೆಡೆ ವಿಶ್ವ ಶಾಂತಿ, ವಿಶ್ವ ಪ್ರೇಮ ಮತ್ತು ವಿಶ್ವ ಭ್ರಾತೃತ್ವ ಮೂಡಲಿದ್ದು, 2600 ವರ್ಷಗಳ ಹಿಂದೆ ತಿಳಿಸಿದ ಅವರ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ ಎಂದರು.

ಉಡುಪಿ ಶಾಸಕ ರಘುಪತಿ ಭಟ್,  ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಜೈನ ಮಿಲನ್‌ನ ಅಧ್ಯಕ್ಷ ಸುಧೀರ್‌ಕುಮಾರ್ ಜೈನ್, ನಿರ್ದೇಶಕ ಪ್ರಸನ್ನಕುಮಾರ್, ಕಾರ್ಯಾದ್ಯಕ್ಷ ರಾಜವರ್ಮ ಅರಿಗ ಮತ್ತಿತರರು ಉಪಸ್ಥಿತರಿದ್ದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X