ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಮತ್ತು ಬಂಧಿಸುವಂತೆ ಆಗ್ರಹಿಸಿ ನಗರದ ಫಳ್ನೀರ್ ವಾರ್ಡ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಗುರುವಾರ ಸೈಂಟ್ ಮೇರಿಸ್ ಶಾಲೆಯ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ನೇತೃತ್ವವನ್ನು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಸನ್ ಫಳ್ನೀರ್, ಎನ್‌ಎಸ್‌ಯುಐ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹಿಲ್ ಎ.ಕೆ., ಅಬ್ದುಲ್ ಸಲೀಂ, ಝಾಕಿರ್ ಬಂದರ್, ನೂರ್ ಬಜಾಲ್, ಮೊಹಿಮಿನ್ ಕೆಂಪಿ, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದ.ಕ. ಕಾರ್ಯಾಧ್ಯಕ್ಷ ನೂರ್ ಮುಹಮ್ಮದ್ ಮತ್ತಿತರರು ವಹಿಸಿದ್ದರು.
Next Story