ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗಂಭೀರ ಆರೋಪ ಎದುರಿಸುತ್ತಿದ್ದ ಕೆ.ಎಸ್ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇದೀಗ ಶಿವಮೊಗ್ಗ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಾಗೂ ಈಶ್ವರಪ್ಪ ಅವರ ಅಭಿಮಾನಿಗಳು ಈಶ್ವರಪ್ಪ ಅವರ ರಾಜೀನಾಮೆ ಹಿಂಪಡೆಯುವಂತೆ ಒತ್ತಾಯಿಸಿದರು.
Next Story






.jpeg)


