ಉಡುಪಿ: ಕಾಂಗ್ರೆಸ್‌ನಿಂದ ಅಂಬೇಡ್ಕರ್ ಜಯಂತಿ

ಉಡುಪಿ : ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೧ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿ ಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಕಡೇಕಾರ್ ಗ್ರಾಪಂ ಅಧ್ಯಕ್ಷೆ ಸರಸ್ವತಿ, ಸದಸ್ಯರಾದ ಸುಕನ್ಯಾ ರಾಘವ ಪೂಜಾರಿ, ತೆಂಕನಿಡಿಯೂರು ಗ್ರಾಪಂ ಸದಸ್ಯರಾದ ಶರತ್ ಶೆಟ್ಟಿ, ಉಡುಪಿ ಬ್ಲಾಕ್ ಎಸ್‌ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ಭಾಗವಹಿಸಿದ್ದರು.
ಉಡುಪಿ ಬ್ಲಾಕ್ ಪ್ರಚಾರ ಸಮಿತಿಯ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಸದಾಶಿವ ಕಟ್ಟೆಗುಡ್ಡೆ, ಪಕ್ಷದ ಹಿರಿಯ ಮುಖಂಡರಾದ ನಾಗೇಶ್ ಕುಮಾರ್ ಉದ್ಯಾವರ, ಜಯ ಕುಮಾರ್, ರಮೇಶ್ ಮಲ್ಪೆ, ಆಶಾ ಚಂದ್ರಶೇಖರ, ರಮಾದೇವಿ, ಪ್ರಮಿಳಾ ಸುವರ್ಣ, ಅರುಣಾ ಕೋಟ್ಯಾನ್, ಸತೀಶ್ ಕುಮಾರ ಮಂಚಿ, ಸಾಯಿರಾಜ್, ಸಂಜಯ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಎಸ್‌ಸಿ ಘಟಕದ ಅಧ್ಯಕ್ಷ ಗಣೇಶ್ ನೆರ್ಗಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸತೀಶ್ ಕುಮಾರ್ ಮಂಚಿ ವಂದಿಸಿದರು.







