ಉತ್ತರಪ್ರದೇಶ: ಬಿ.ಆರ್. ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿದ ದುಷ್ಕರ್ಮಿಗಳು

ಸಾಂದರ್ಭಿಕ ಚಿತ್ರ
ನೋಯ್ಡ, ಎ. 14: ಉತ್ತರಪ್ರದೇಶದ ನೋಯ್ಡದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಸೆಕ್ಟರ್ 63 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಛಿಜಾರ್ಸಿ ಗ್ರಾಮದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಅವರ ಜನ್ಮ ದಿನವಾದ ಗುರುವಾರ ವಿರೂಪಗೊಳಿಸಲಾಗಿದೆ.
ಘಟನೆ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿರೂಪಗೊಳಿಸಲಾದ ಪ್ರತಿಮೆಯ ಸ್ಥಳದಲ್ಲಿ ಹೊಸ ಪ್ರತಿಮೆಯನ್ನು ಸ್ಥಳೀಯರ ನೆರವಿನಿಂದ ಪ್ರತಿಷ್ಠಾಪಿಸಲಾಗಿದೆ ಎಂದು ಪೊಲೀಸ್ ವಕ್ತಾರ ಹೇಳಿದ್ದಾರೆ. ಈ ಪ್ರದೇಶದಲ್ಲಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಈ ಬಗ್ಗೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಕಾನೂನಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Next Story





