ಜಮ್ಮುಕಾಶ್ಮೀರ: ಎನ್ಕೌಂಟರ್ ನಲ್ಲಿ ನಾಲ್ವರು ಶಂಕಿತ ಉಗ್ರರು ಸಾವು

ಸಾಂದರ್ಭಿಕ ಚಿತ್ರ
ಶ್ರೀನಗರ, ಎ. 14: ಜಮ್ಮು ಹಾಗೂ ಕಾಶ್ಮೀರದಲ್ಲಿ ಭದ್ರತಾ ಪಡೆ ಗುರುವಾರ ನಡೆಸಿದ ಎನ್ಕೌಂಟರ್ನಲ್ಲಿ ನಾಲ್ವರು ಶಂಕಿತ ಉಗ್ರರು ಹತರಾಗಿದ್ದಾರೆ. ಇದೇ ಸಂದರ್ಭ ಗುಂಡಿನ ಚಕಮಕಿ ನಡೆಯುತ್ತಿರುವ ಸ್ಥಳಕ್ಕೆ ತೆರಳುತ್ತಿದ್ದ ಸೇನಾ ವಾಹನ ಅಫಘಾತಕ್ಕೀಡಾಗಿ ಇಬ್ಬರು ಯೋಧರು ಕೂಡ ಸಾವನ್ನಪ್ಪಿದ್ದಾರೆ.
ಶೋಪಿಯಾನದ ಝೈನಪೋರಾ ಪ್ರದೇಶದ ಬಡಿಗಾಂವ್ನಲ್ಲಿ ಶಂಕಿತ ಉಗ್ರರು ಇರುವ ಕುರಿತು ಮಾಹಿತಿ ಸ್ವೀಕರಿಸಿ ಭದ್ರತಾ ಪಡೆ ಆ ಪ್ರದೇಶವನ್ನು ಸುತ್ತುವರಿಯಿತು ಹಾಗೂ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ಸಂದರ್ಭ ಶಂಕಿತ ಉಗ್ರರು ಗಂಡು ಹಾರಿಸಿದರು. ಯೋಧರು ಪ್ರತಿದಾಳಿ ನಡೆಸಿದರು. ಇದರಿಂದ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಂಕಿತ ಉಗ್ರರು ಹತರಾದರು. ಆದರೆ, ಅವರ ಗುರುತು ಹಾಗೂ ಅವರು ಸೇರಿದ ಸಂಘಟನೆಯ ಹೆಸರು ಇದುವರೆಗೆ ತಿಳಿು ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
Next Story