Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಈಶ್ವರಪ್ಪ ರಾಜೀನಾಮೆ: ನ್ಯಾಯಕ್ಕಾಗಿ ನಾವು...

ಈಶ್ವರಪ್ಪ ರಾಜೀನಾಮೆ: ನ್ಯಾಯಕ್ಕಾಗಿ ನಾವು ಇನ್ನೂ ಬಹುದೂರದ ಹಾದಿ ಸಾಗಬೇಕಿದೆ ಎಂದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ15 April 2022 12:04 AM IST
share
ಈಶ್ವರಪ್ಪ ರಾಜೀನಾಮೆ: ನ್ಯಾಯಕ್ಕಾಗಿ ನಾವು ಇನ್ನೂ ಬಹುದೂರದ ಹಾದಿ ಸಾಗಬೇಕಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಸಚಿವ ಈಶ್ವರಪ್ಪ ಅವರು ನಿನ್ನೆವರೆಗೂ ಪ್ರಾಣಹೋದರೂ ರಾಜೀನಾಮೆ ನೀಡಲ್ಲ ಎನ್ನುತ್ತಿದ್ದವರು ಇಂದು ನಮ್ಮ ಹೋರಾಟಕ್ಕೆ ಮಣಿದು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇದು ನಮ್ಮ ಹೋರಾಟಕ್ಕೆ ದೊರೆತ ಆರಂಭಿಕ ಜಯವಷ್ಟೆ, ನ್ಯಾಯಕ್ಕಾಗಿ ನಾವು ಇನ್ನೂ ಬಹುದೂರದ ಹಾದಿ ಸಾಗಬೇಕಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸಿದ್ದರಾಮಯ್ಯ ಅವರ ಟ್ವೀಟ್ ಇಂತಿದೆ

ಸಚಿವ ಈಶ್ವರಪ್ಪ ರಾಜೀನಾಮೆ ನಮ್ಮ ಪ್ರಮುಖ ಬೇಡಿಕೆಯೇ ಅಲ್ಲ. ಮುಖ್ಯವಾಗಿ ಆಗಬೇಕಿರುವುದು ಈಶ್ವರಪ್ಪ ಅವರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ -13 ರಡಿ ಪ್ರಕರಣ ದಾಖಲು ಮಾಡಿ, ತಕ್ಷಣ ಬಂಧಿಸುವುದು ಹಾಗೂ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸುವುದು. 

ನಿನ್ನೆ ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಯಾರೆಂದೇ ನನಗೆ ಗೊತ್ತಿಲ್ಲ ಎಂದು ಹೇಳುತ್ತಿದ್ದರು. ಸಂತೋಷ್ ಪಾಟೀಲ್ ಯಾರು ಅಂತಲೇ ಗೊತ್ತಿಲ್ಲದೆ ಸ್ವತಃ ಈಶ್ವರಪ್ಪ ಅವರೇ ಆತನ ಮೇಲೆ ಮಾನನಷ್ಟ ಮೊಕದ್ದಮೆ ಹೇಗೆ ದಾಖಲಿಸಿದ್ದರು?  ಇಲ್ಲಿಂದಲೇ ಈಶ್ವರಪ್ಪ ಅವರ ಸುಳ್ಳುಗಳ ಅನಾವರಣ ಶುರುವಾದದ್ದು. 

ಬೆಳಗಾವಿ ಜಿಲ್ಲೆಯ ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ಹೇಳಿಕೆ ನೀಡಿ "ನಾನು ಮತ್ತು ಸಂತೋಷ್ ಪಾಟೀಲ್ ಅವರು ಎರಡು ಬಾರಿ ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದೆವು, ಸ್ವತಃ ಸಚಿವರೇ ಸಂತೋಷ್ ಪಾಟೀಲ್ ಗೆ ಕೆಲಸ ಮಾಡಲು ಹೇಳಿದ್ದರು, ಸಚಿವರ ಅನುಮತಿ ಮೇರೆಯೇ ಅವರು ಎಲ್ಲ ಕೆಲಸ ಪೂರ್ಣಗೊಳಿಸಿದ್ದಾರೆ'' ಎಂದಿದ್ದಾರೆ. 

ಈಶ್ವರಪ್ಪ ಕಮಿಷನ್ ಗಾಗಿ ಕಿರುಕುಳ ನೀಡಿದ್ದಾರೆ ಎನ್ನಲು ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದ ಪತ್ರ ಸಾಕ್ಷಿ. ಜೊತೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದಾರೆ. ಇದನ್ನು ಬಿಜೆಪಿಯವರಿಂದ ಅಲ್ಲಗಳೆಯಲು ಸಾಧ್ಯವೇ? 

ಪ್ರಧಾನಿ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕಾಮಗಾರಿ ಕೆಲಸ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ, ಈಗ ಬಿಲ್ ಹಣ ಪಾವತಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸಂತೋಷ್ ಪಾಟೀಲ್ ಸ್ಪಷ್ಟವಾಗಿ ಹೇಳಿದ್ದಾರೆ.
ಆದರೂ ಈ ಬಗ್ಗೆ ಕ್ರಮ‌ಕೈಗೊಳ್ಳದ ಪ್ರಧಾನಿಗಳು ಈಶ್ವರಪ್ಪನಂತೆ ಈ ಸಾವಿಗೆ ಸಮಾನ ಹೊಣೆಗಾರರು.

ಈಶ್ವರಪ್ಪ ಅವರೇ ಸಂತೋಷ್ ಪಾಟೀಲ್ ಸಾವಿಗೆ ಕಾರಣ ಎಂದು ಆತನ ಹೆಂಡತಿ ಮತ್ತು ತಾಯಿ ಹೇಳಿದ್ದಾರೆ. ಸಂತೋಷ್ ಪಾಟೀಲ್ ಸಾಯುವ ಮುನ್ನ ತನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ವಾಟ್ಸಾಪ್ ಮೂಲಕ ಡೆತ್ ನೋಟ್ ಕಳಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈಗ ಲಭ್ಯವಿರುವ ಎಲ್ಲಾ ಸಾಂದರ್ಭಿಕ ಸಾಕ್ಷ್ಯಗಳು ಈಶ್ವರಪ್ಪ ಅಪರಾಧಿ ಎಂದು ತೋರಿಸುತ್ತಿವೆ. ಇಂಥದ್ದೊಂದು ಅಮಾನವೀಯ ಅಪರಾಧ ಎಸಗಿರುವ ಆರೋಪಿ ನಂಬರ್ 1 ಈಶ್ವರಪ್ಪ ಅವರನ್ನು ಬಂಧಿಸದೆ ಸರ್ಕಾರ ಈ ನೆಲದ ಕಾನೂನಿಗೆ ಅಗೌರವ ತೋರುತ್ತಿದೆ. 

ರಾಜ್ಯ ಸರ್ಕಾರ ಮೃತ ಗುತ್ತಿಗೆದಾರನ ಕುಟುಂಬಸ್ಥರಿಗೆ ರೂ. 1 ಕೋಟಿ ಪರಿಹಾರ ನೀಡಬೇಕು, ಮೃತನ ಪತ್ನಿ ವಿದ್ಯಾವಂತೆಯಾಗಿದ್ದು ಆಕೆಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಆತ ಪೂರ್ಣಗೊಳಿಸಿದ್ದ ರೂ. 4 ಕೋಟಿ ಮೊತ್ತದ ಎಲ್ಲಾ ಕಾಮಗಾರಿಗಳ ಬಿಲ್ ಅನ್ನು ಈ ಕೂಡಲೇ ಬಿಡುಗಡೆ ಮಾಡಬೇಕು. 

ಭ್ರಷ್ಟಾಚಾರವನ್ನು ಬೆಂಬಲಿಸುವ ಕೆಲಸ ಸ್ವತಃ ಮುಖ್ಯಮಂತ್ರಿಗಳೇ ಮಾಡುತ್ತಿದ್ದಾರೆ. ಈ ಇಡೀ ಸರ್ಕಾರದ ಮೇಲೆಯೇ ರಾಜ್ಯ ಗುತ್ತಿಗೆದಾರರ ಸಂಘದವರು 40% ಕಮಿಷನ್ ಆರೋಪ ಮಾಡಿದ್ದಾರೆ. ಇದನ್ನು ಕೂಡ ನ್ಯಾಯಾಂಗ ತನಿಖೆಗೆ ನೀಡಬೇಕು.
ಆಗ ಬಿಜೆಪಿ ಸರ್ಕಾರದ ಎಲ್ಲ ಭ್ರಷ್ಟ ಹೆಗ್ಗಣಗಳು ಬಿಲದಿಂದ ಹೊರಬರಲಿವೆ. 

ನಮ್ಮ ಈ ಎಲ್ಲಾ ಆಗ್ರಹಗಳು ಇನ್ನೂ ಈಡೇರಿಲ್ಲ, ಹಾಗಾಗಿ ನಾವು ನಿರ್ಧರಿಸಿದಂತೆ 24 ಗಂಟೆಗಳ ಕಾಲ ವಿಧಾನಸೌಧದ ಮುಂಭಾಗ ಧರಣಿಯನ್ನು ಮುಂದುವರೆಸುತ್ತೇವೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಜನಜಾಗೃತಿ ಮೂಡಿಸುತ್ತೇವೆ.
ಕೊಲೆಗಡುಕ, ಭ್ರಷ್ಟ ಸರ್ಕಾರ ತೊಲಗುವ ವರೆಗೆ ನಮ್ಮ ಹೋರಾಟ ಜಾರಿಯಿರಲಿದೆ ಎಂದು ತಿಳಿಸಿದ್ದಾರೆ. 

ನಮ್ಮ ಈ ಎಲ್ಲಾ ಆಗ್ರಹಗಳು ಇನ್ನೂ ಈಡೇರಿಲ್ಲ, ಹಾಗಾಗಿ ನಾವು ನಿರ್ಧರಿಸಿದಂತೆ 24 ಗಂಟೆಗಳ ಕಾಲ ವಿಧಾನಸೌಧದ ಮುಂಭಾಗ ಧರಣಿಯನ್ನು ಮುಂದುವರೆಸುತ್ತೇವೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಜನಜಾಗೃತಿ ಮೂಡಿಸುತ್ತೇವೆ.
ಕೊಲೆಗಡುಕ, ಭ್ರಷ್ಟ @BJP4Karnataka ಸರ್ಕಾರ ತೊಲಗುವವರೆಗೆ ನಮ್ಮ ಹೋರಾಟ ಜಾರಿಯಿರಲಿದೆ. 11/11#KillerBJP pic.twitter.com/jvf24S8qp4

— Siddaramaiah (@siddaramaiah) April 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X