ಚಹಾ ಜೊತೆಗೆ ಉಪಾಹಾರ ನೀಡಿಲ್ಲ ಎಂಬ ಕಾರಣಕ್ಕೆ ಸೊಸೆಯ ಮೇಲೆ ಗುಂಡು ಹಾರಿಸಿದ ಮಾವ!
![ಚಹಾ ಜೊತೆಗೆ ಉಪಾಹಾರ ನೀಡಿಲ್ಲ ಎಂಬ ಕಾರಣಕ್ಕೆ ಸೊಸೆಯ ಮೇಲೆ ಗುಂಡು ಹಾರಿಸಿದ ಮಾವ! ಚಹಾ ಜೊತೆಗೆ ಉಪಾಹಾರ ನೀಡಿಲ್ಲ ಎಂಬ ಕಾರಣಕ್ಕೆ ಸೊಸೆಯ ಮೇಲೆ ಗುಂಡು ಹಾರಿಸಿದ ಮಾವ!](https://www.varthabharati.in/sites/default/files/images/articles/2022/04/15/331811-1650004582.jpeg)
ಥಾಣೆ(ಮಹಾರಾಷ್ಟ್ರ): ಮಹಾರಾಷ್ಟ್ರದ ಥಾಣೆಯಲ್ಲಿರುವ ನಿವಾಸದಲ್ಲಿ ವ್ಯಕ್ತಿಯೊಬ್ಬರು ತನಗೆ ಬೆಳಗಿನ ಉಪಾಹಾರವನ್ನು ನೀಡಲಿಲ್ಲ ಎಂದು ಆರೋಪಿಸಿ ಸೊಸೆಯ ಮೇಲೆ ತನ್ನ ರಿವಾಲ್ವರ್ನಿಂದ ಗುಂಡು ಹಾರಿಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
42 ವರ್ಷದ ಮಹಿಳೆಯ ಹೊಟ್ಟೆಗೆ ಗುಂಡು ತಗುಲಿದ್ದು, ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆರೋಪಿ ಕಾಶಿನಾಥ ಪಾಂಡುರಂಗ ಪಾಟೀಲ (76 ವರ್ಷ ) ಎಂಬಾತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ, 506 (ಕ್ರಿಮಿನಲ್ ಬೆದರಿಕೆ) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಅಪರಾಧವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಇನ್ನಷ್ಟೇ ಬಂಧಿಸಬೇಕಾಗಿದೆ ಎಂದು ಹಿರಿಯ ಇನ್ಸ್ಪೆಕ್ಟರ್ ಸಂತೋಷ್ ಘಾಟೇಕರ್ ತಿಳಿಸಿದ್ದಾರೆ
ಗುರುವಾರ ಬೆಳಗ್ಗೆ 11:30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಆರೋಪಿಯ ಮತ್ತೊಬ್ಬ ಸೊಸೆ ನೀಡಿದ ದೂರನ್ನು ಉಲ್ಲೇಖಿಸಿದ ಅಧಿಕಾರಿ ತಿಳಿಸಿದ್ದಾರೆ.
ಬೆಳಗಿನ ಚಹಾದ ಜೊತೆಗೆ ಸೊಸೆ ತನಗೆ ಉಪಹಾರವನ್ನು ನೀಡದೇ ಇದ್ದುದರಿಂದ ಆರೋಪಿಯು ಸಿಟ್ಟಾಗಿದ್ದನು ಎಂದು ಅವರು ಹೇಳಿದರು.