ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಯತ್ನ: ಆರೋಪಿ ವಶಕ್ಕೆ

ಮಂಗಳೂರು: ಬಟ್ಟೆಯ ಗುಂಡಿಗಳ ರೂಪದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗುರುವಾರ ದುಬೈನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿನೋರ್ವ ನನ್ನು ತಪಾಸನೆಗೆ ಒಳಪಡಿಸಿದಾಗ 100 ಗ್ರಾಂ. ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಚಿನ್ನವನ್ನು ಸಣ್ಣ ವಾಶರ್ ರೂಪದಲ್ಲಿ ಮಾರ್ಪಡಿಸಿ ಬಟ್ಟೆಗಳ ಗುಂಡಿಗಳಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





