Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುವಾದ, ಜಾತಿವಾದ ಕಡಿವಾಣಕ್ಕೆ ಸಂವಿಧಾನ...

ಕೋಮುವಾದ, ಜಾತಿವಾದ ಕಡಿವಾಣಕ್ಕೆ ಸಂವಿಧಾನ ಅವಶ್ಯ: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ

''ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ''

ವಾರ್ತಾಭಾರತಿವಾರ್ತಾಭಾರತಿ15 April 2022 6:20 PM IST
share
ಕೋಮುವಾದ, ಜಾತಿವಾದ ಕಡಿವಾಣಕ್ಕೆ ಸಂವಿಧಾನ ಅವಶ್ಯ: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು, ಎ.15: ಶೂದ್ರ ಸಮಾಜ ಸಂಘಟನಾತ್ಮಕವಾಗಿ ಹೋರಾಟವನ್ನು ನಡೆಸಬೇಕು. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಮತ್ತು ಸಂವಿಧಾನದಿಂದ ಕೋಮುವಾದ, ಜಾತಿವಾದಕ್ಕೆ ಕಡಿವಾಣ ಹಾಕಬಹುದು ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ. 

ಶುಕ್ರವಾರ ನಗರದ ಚಿತ್ರಕಲಾ ಪರಿಷತ್‍ನಲ್ಲಿ ಕರ್ನಾಟಕ ರಾಜ್ಯ ಅತಿ ಹಿಂದುಳಿದ ಜಾಗೃತ ವೇದಿಕೆ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜನಾಭಿಪ್ರಾಯವನ್ನು ಪಡೆಯಲು ನಮ್ಮ ದೇಶದ ಬಹುತ್ವ ಮತ್ತು ಸೌಹಾರ್ದತೆಯನ್ನು ನಾಶ ಮಾಡಲು ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮತ್ತು ಅದರ ಪಳೆಯುಳಿಕೆಗಳು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು.

ಅಂಬೇಡ್ಕರ್ ಜಯಂತಿ ರಾಜಕೀಯ ಹುಟ್ಟುಹಬ್ಬದ ಆಚರಣೆಯಲ್ಲ. ಭಾರತದಲ್ಲಿ ಪ್ರತಿ ಹೋರಾಟಗಳನ್ನು ನಿರೂಪಿಸುವಂತಹ ಅತ್ಯಂತ ಮಹತ್ವದ ದಿನ. 21ನೆ ಶತಮಾನ ಸವಾಲಿನಿಂದ ಕೂಡಿದೆ. ಈ ಸವಾಲು, ಭಾಷೆ, ಧರ್ಮ, ಜಾತಿಗೆ ಸೀಮಿತವಾಗಿಲ್ಲ. ಇಡೀ ಸಂವಿಧಾನಕ್ಕೆ ಸವಾಲು ಎಸೆಯುವಂತಹ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
 
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ, ಮಠಾಧೀಶರು, ಧರ್ಮಗುರುಗಳು, ಸಾಹಿತಿಗಳನ್ನು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಂ.ಸಿ. ವೇಣುಗೋಪಾಲ್ ಅವರನ್ನು ಸನ್ಮಾನಿಸಲಾಯಿತು. 

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್, ಜಾಗೃತ ವೇದಿಕೆಯ ಪ್ರಧಾನ ಕಾರ್ಯದರ್ಶಿ ನಾಗರಾಜ್, ಖಜಾಂಚಿ ಮಂಜುನಾಥ್, ಪತ್ರಕರ್ತ ರವೀಂದ್ರ ಭಟ್, ಸೇರಿದಂತೆ ಮಠಾಧೀಶರು, ಧರ್ಮಗುರುಗಳು, ಸಾಹಿತಿಗಳು, ವಕೀಲರು, ಹಿಂದುಳಿದ ಸಮುದಾಯಗಳ ಮುಖಂಡರು ಹಾಗೂ ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಬೆಂಗಳೂರು ವಿವಿಯ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನಟರಾಜ್ ಹುಳಿಯಾರ್ ಅವರು ಉಪನ್ಯಾಸ ನೀಡಿದರು.

ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ 

ಸಂವಿಧಾನದ ಸುಖೀ ರಾಜ್ಯ ಮತ್ತು ಮೌಲ್ಯ, ಧರ್ಮ, ಜಾತಿ, ಪ್ರದೇಶಗಳಲ್ಲಿ ತಾರತಮ್ಯ ಮಾಡದೇ ಎಲ್ಲರಿಗೂ ಸಮಾನತೆ ಮತ್ತು ಸಮಾನಾವಕಾಶಗಳನ್ನು ಒದಗಿಸಿಕೊಟ್ಟು ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ. ನಾವು ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಹೀಗಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಿ ಸಂವಿಧಾನದ ರಕ್ಷಣೆಯನ್ನು ಮಾಡಬೇಕು ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X