ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಶೋಭಾ ಯಾತ್ರೆ

ಕುಂದಾಪುರ : ಇಲ್ಲಿ ನಡೆದಿರುವ 15ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರ ಧ್ವಜಾರೋಹಣ ವನ್ನು ಶುಕ್ರವಾರ ಬೆಳಗ್ಗೆ ಕುಂದಾಪುರ ಪುರಸಭೆಯ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ನೆರವೇರಿಸಿದರು. ಕಸಾಪ ಜಿಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪರಿಷತ್ ಧ್ವಜಾರೋಹಣ ನೆರವೇರಿಸಿದರು.
ಸಾಹಿತ್ಯ ಸಮ್ಮೇಳನದ ಶೋಭಾಯಾತ್ರೆಗೆ ಶ್ರೀಕುಂದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಾನಂದ ಛಾತ್ರ ಚಾಲನೆ ನೀಡಿದರು. ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ..ಎ.ವಿ.ನಾವಡ ಹಾಗೂ ಡಾ.ಗಾಯತ್ರಿ ವಿ.ನಾವಡ ದಂಪತಿಯನ್ನು ಅಲಂಕರಿಸಿದ ತೆರೆದ ವಾಹನದಲ್ಲಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಹಿತ್ಯ ಸಮ್ಮೇಳನ ನಡೆಯುವ ಸಭಾಭವನಕ್ಕೆ ಕರೆತರಲಾಯಿತು.
ಶೋಭಾ ಯಾತ್ರೆಯಲ್ಲಿ ನಗರದ ವಿವಿಧ ಶಾಲಾ ವಿದ್ಯಾರ್ಥಿಗಳು, ಸಂಘಸಂಸ್ಥೆ ಗಳ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಂಡಿದ್ದರು. ಸಮ್ಮೇಳನ ಸಭಾಂಣಕ್ಕೆ ಆಗಮಿಸಿದ ನಾವಡ ದಂಪತಿಗೆ ಮುತ್ತೈದೆಯರು ಆರತಿ ಬೆಳಗಿ, ಹೂಮಾಲೆ ಹಾಕುವ ಮೂಲಕ ಸ್ವಾಗತಿಸಿದರು.

Next Story