Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ​ಈಶ್ವರಪ್ಪ ಬಂಧನವಾಗುವವರೆಗೆ ಹೋರಾಟ:...

​ಈಶ್ವರಪ್ಪ ಬಂಧನವಾಗುವವರೆಗೆ ಹೋರಾಟ: ಹರೀಶ್ ಕುಮಾರ್

ಎ.16ರಂದು ಮಂಗಳೂರಿನಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 April 2022 7:14 PM IST
share

ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಈಶ್ವರಪ್ಪರ ಬಂಧನವಾಗುವವರೆಗೂ ಜಿಲ್ಲೆಯ ಪ್ರತಿ ಬ್ಲಾಕ್ ಮತ್ತು ವಿಧಾನಸಭಾ ಕ್ಷೇತ್ರ ದಲ್ಲೂ ಹೋರಾಟ ನಡೆಸುವುದಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.16ರಂದು ಮಧ್ಯಾಹ್ನ ೨ಕ್ಕೆ ನಗರದ ಕ್ಲಾಕ್ ಟವರ್ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿದೆ. ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಉಪಾಧ್ಯಕ್ಷೆ ಪದ್ಮಾವತಿ ಮತ್ತಿತರ ಮುಖಂಡರು ಭಾಗವಹಿಸಲಿ ದ್ದಾರೆ. ಇದರೊಂದಿಗೆ ಜಿಲ್ಲಾದ್ಯಂತ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದರು.

ಈಶ್ವರಪ್ಪ ರಾಜೀನಾಮೆ ನೀಡುವ ಮೂಲಕ ತಪ್ಪು ಮಾಡಿದ್ದನ್ನು ಒಪ್ಪಿಕೊಂಡಂತಾಗಿದೆ. ಹಾಗಾಗಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಅಲ್ಲದೆ ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು. ಇಲ್ಲದಿದ್ದರೆ ಎರಡೂ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಯಾವುದೇ ಕಾರಣಕ್ಕೂ ರಾಜ್ಯ ಸರಕಾರದ ಅಧೀನ ಸಂಸ್ಥೆಗಳಿಂದ ತನಿಖೆ ನಡೆಸಬಾರದು ಎಂದು ಹರೀಶ್ ಕುಮಾರ್ ಒತ್ತಾಯಿಸಿದರು.

ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರು ತಿಂಗಳ ಹಿಂದೆಯೇ ಶೇ.೪೦ ಕಮಿಷನ್ ಆರೋಪ ಮಾಡಿದ್ದರೂ ಬಿಜೆಪಿ ವರಿಷ್ಠರು ಗಂಭೀರವಾಗಿ ಪರಿಗಣಿಸಲಿಲ್ಲ. ಹಾಗಾಗಿ ಸಂತೋಷ್ ಪಾಟೀಲ್ ಪ್ರಾಣಕಳಕೊಳ್ಳುವಂತಾಯಿತು ಎಂದ ಹರೀಶ್ ಕುಮಾರ್ ಹಿಂದಿನ ಕಾಂಗ್ರೆಸ್ ಸರಕಾರದ ವಿರುದ್ಧ ಶೇ.೧೦ ಕಮಿಷನ್ ಆರೋಪ ಮಾಡಿದ್ದ ನರೇಂದ್ರ ಮೋದಿಗೆ ಈಗ ಶೇ.೪೦ ಕಮಿಷನ್ ದೂರು ನೀಡಿದರೂ ಯಾಕೆ ತನಿಖೆ ನಡೆಸಲು ಮುಂದಾಗಿಲ್ಲ. ಭ್ರಷ್ಟಾಚಾರ ನಡೆಸುವುದೇ ಬಿಜೆಪಿಯವರ ಉದ್ದೇಶವಾ ಎಂದು ಪ್ರಶ್ನಿಸಿದರು.

ಈಶ್ವರಪ್ಪ ಮೊತ್ತ ಭರಿಸಲಿ: ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪರ ಮೌಖಿಕ ಆದೇಶದ ಮೇರೆಗೆ 4.18 ಕೋ.ರೂ. ಕಾಮಗಾರಿ ನಡೆಸಿದ್ದರಿಂದ ಆ ಮೊತ್ತವನ್ನು ಸರಕಾರದಿಂದ ಭರಿಸದೆ ಈಶ್ವರಪ್ಪ ಅವರಿಂದಲೇ ಭರಿಸಬೇಕು. ಈಶ್ವರಪ್ಪ ಅವರ ಆಸ್ತಿ ಮುಟ್ಟುಗೋಲು ಹಾಕಿ ಹಣ ನೀಡಲಿ ಎಂದು ಒತ್ತಾಯಿಸಿದರು.

ಕಾಂಗ್ರೆಸಿಗರು ಜೈಲಿನೊಳಗಿರಬೇಕಿತ್ತು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆಗೆ ಪ್ರತಿಕ್ರಿಯಿಸಿದ ಹರೀಶ್ ಕುಮಾರ್, ಈಗ ರಾಜ್ಯ ಮತ್ತು ಕೇಂದ್ರದಲ್ಲೂ ಬಿಜೆಪಿಯದ್ದೇ ಸರಕಾರವಿದೆ. ಸುಮ್ಮನೆ ಆರೋಪ ಮಾಡುವ ಬದಲು ಬಂಧಿಸಲಿ ಜೈಲಿಗಟ್ಟಲಿ ಎಂದು ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಪಕ್ಷದ ಮುಖಂಡರಾದ ನೀರಜ್‌ಪಾಲ್, ಶುಭೋದಯ ಆಳ್ವ, ಕೃಪಾ ಅಮರ್ ಆಳ್ವ, ಆಶಿತ್ ಪಿರೇರಾ, ದೀಕ್ಷಿತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X