ಹಿರಿಯ ಮಹಿಳಾ ಪೊಲೀಸ್ ಅಧಿಕಾರಿ ಶೋಭಾ ಕಟಾವ್ಕರ್ ಅನುಮಾನಾಸ್ಪದ ಸಾವು: ಫ್ಲ್ಯಾಟ್‌ನಲ್ಲಿ ಮೃತದೇಹ ಪತ್ತೆ

ಬೆಂಗಳೂರು, ಎ.15: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಶೋಭಾ ಕಟಾವ್ಕರ್ (53) ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಬೆಂಗಳೂರಿನ ಪುಟ್ಟೇನಹಳ್ಳಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆ.ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಮನೆಯಲ್ಲಿ ಒಬ್ಬರೇ ಇದ್ದ ಶೋಭಾ ಕಟಾವ್ಕರ್ ಅವರು ಮೊಬೈಲ್ ಕರೆ ಸ್ವೀರಿಸದ ಕಾರಣ ಮನೆಯವರು ಭದ್ರತಾ ಸಿಬ್ಬಂದಿ ಅನ್ನು ಪರಿಶೀಲಿಸಲು ಸೂಚಿಸಿದ್ದರು.
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪರಿಶೀಲಿಸಿದಾಗ ಫ್ಲ್ಯಾಟ್‌ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ಇದ್ದು, ಪುಟ್ಟೇನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಲ್ಲದೆ, ಇತ್ತೀಚಿಗೆ ಎಸ್ಪಿ ಆಗಿ ಮುಂಭಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಅವರು ಕಲಬುರ್ಗಿ ಪಿಟಿಸಿ ಉಪ ಪ್ರಾಂಶುಪಾಲರಾಗಿ ನಿಯೋಜನೆಗೊಂಡಿದ್ದರು.
Next Story





