Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂತೋಷ್ ಆತ್ಮಹತ್ಯೆ ಪ್ರಕರಣ ತಾರ್ಕಿಕ...

ಸಂತೋಷ್ ಆತ್ಮಹತ್ಯೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಹೋರಾಟ: ಸಿದ್ದರಾಮಯ್ಯ

‘'ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಎ.16ರಂದು ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ''

ವಾರ್ತಾಭಾರತಿವಾರ್ತಾಭಾರತಿ15 April 2022 10:55 PM IST
share
ಸಂತೋಷ್ ಆತ್ಮಹತ್ಯೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಹೋರಾಟ: ಸಿದ್ದರಾಮಯ್ಯ

ಬೆಂಗಳೂರು, ಎ. 15: ‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಹೋರಾಟದ ಮೂಲಕ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಎಲ್ಲ ರೀತಿ ಪ್ರಯತ್ನ ಮಾಡಲಿದೆ. ಬಿಜೆಪಿ ಕಾರ್ಯಕಾರಣಿ ಸಭೆ(ಎ.16) ನಡೆಯುವ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲೂ ನಾವು ಪ್ರತಿಭಟನೆ ಮಾಡುತ್ತೇವೆ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ 24 ಗಂಟೆಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಕ್ತಾಯದ ಬಳಿಕ ಮಾತನಾಡಿದ ಅವರು, ‘ನಾವಿದನ್ನು ರಾಜಕಾರಣಕ್ಕಾಗಿ ಮಾಡುತ್ತಿಲ್ಲ, ಮೃತ ಸಂತೋಷ್ ಕುಟುಂಬದವರಿಗೆ ನ್ಯಾಯ ಸಿಗಬೇಕೆಂಬುದು ನಮ್ಮ ನೈಜ ಆಶಯ. ಸಂವಿಧಾನಬದ್ಧ ವಿಪಕ್ಷವಾಗಿ ರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ನಮ್ಮ ಕರ್ತವ್ಯ ಆಗಿದೆ' ಎಂದು ಹೇಳಿದರು.

‘ನಿನ್ನೆ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಒಳಗೊಂಡಂತೆ ಎಲ್ಲ ನಾಯಕರು ಮುಖ್ಯಮಂತ್ರಿಗೆ ಘೇರಾವ್ ಹಾಕುವ ಪ್ರಯತ್ನ ಮಾಡಿದ್ದೆವು. ಕಾಂಗ್ರೆಸ್ ಕಚೇರಿಯಿಂದ ಸಿಎಂ ನಿವಾಸದ ವರೆಗೆ ಕಾಲ್ನಡಿಗೆ ಮೂಲಕ ತೆರಳಬೇಕಿತ್ತು, ಆದರೆ ಮಾರ್ಗಮಧ್ಯದಲ್ಲಿ ಪೊಲೀಸರು ನಮ್ಮನ್ನು ತಡೆದು, ಬಂಧಿಸಿದರು. ಈ ವೇಳೆ ನಾವು ಪೊಲೀಸ್ ಠಾಣೆಯಲ್ಲೆ ಕುಳಿತು ವಿಧಾನಸೌಧದ ಮುಂಭಾಗ 24 ಗಂಟೆಗಳ ಕಾಲ ಅಹೋರಾತ್ರಿ ಧರಣಿ ನಿರ್ಧಾರ ಮಾಡಿದೆವು. ನಮ್ಮ ಧರಣಿ ಮುಕ್ತಾಯಗೊಂಡಿದೆ' ಎಂದರು. 

‘ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಸರಕಾರದ ಶೇ.40ರಷ್ಟು ಕಮಿಷನ್ ಕಿರುಕುಳಕ್ಕೆ ಸಂತೋಷ್  ಎಂಬ ಗುತ್ತಿಗೆದಾರ ಬಲಿಯಾಗಿದ್ದಾನೆ. ಈ ತಿಂಗಳ ಎ.11ರ ರಾತ್ರಿ 10 ರಿಂದ 12ರ ಬೆಳಗ್ಗೆ 6 ಗಂಟೆಯೊಳಗೆ ಸಂತೋಷ್ ಉಡುಪಿಯ ಹೊಟೇಲ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಪಿರ್ಯಾದಿನಲ್ಲಿ ನಮೂದಾಗಿದೆ. ಆದರೆ ಎಫ್‍ಐಆರ್ ಆಗಿರುವುದು 13ನೆ ತಾರೀಖು. ಅದು ನಾವೆಲ್ಲ ಒತ್ತಡ ಹಾಕಿದ ಮೇಲೆ ತಡವಾಗಿ ದಾಖಲಾದದ್ದು. ಪ್ರಶಾಂತ್ ಗೌಡ ಪಾಟೀಲ್ ನೀಡಿರುವ ದೂರಿನಲ್ಲಿ ‘ಹಿಂಡಲಗಾ ಗ್ರಾಮದಲ್ಲಿ ಜಾತ್ರೆ ಇತ್ತು, ಸಾಕಷ್ಟು ಜನ ಸೇರುತ್ತಾರೆಂಬ ಕಾರಣಕ್ಕೆ ಒಂದಷ್ಟು ಕಾಮಗಾರಿಗಳನ್ನು ಮಾಡಬೇಕು ಎಂದು ಊರಿನ ಜನ, ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸಂತೋμï, ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ, ಅದಕ್ಕೆ ಈಶ್ವರಪ್ಪ ಅವರು ಕೆಲಸ ಮಾಡಿ ಮುಗಿಸಿ, ನಂತರ ಹಣ ಬಿಡುಗಡೆ ಮಾಡಿಸುತ್ತೇನೆಂಬ ಭರವಸೆ ನೀಡಿದ್ದಾರೆ, ಸಚಿವರ ಮೌಖಿಕ ಆದೇಶದ ಮೇರೆಗೆ ಸಂತೋμï ಪಾಟೀಲ್ ಮತ್ತವರ ಸ್ನೇಹಿತರು ಸುಮಾರು 4 ಕೋಟಿ ರೂ.ವೆಚ್ಚದ ಕಾಮಗಾರಿಯನ್ನು ಮಾಡಿ ಮುಗಿಸಿ, ಬಿಲ್ ಹಣ ಪಾವತಿಸುವಂತೆ ಕೇಳಿದ್ದಾರೆ, ಅದಕ್ಕೆ ಸಚಿವರು ಹಣ ಬಿಡುಗಡೆ ಮಾಡಲು ಶೇ.40ರಷ್ಟು ಕಮಿಷನ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ' ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

ಕಾಮಗಾರಿ ಮಾಡಲು ಖಾಸಗಿ ವ್ಯಕ್ತಿಗಳಿಂದ ಅಧಿಕ ಬಡ್ಡಿಗೆ ಮತ್ತು ಪತ್ನಿಯ ಒಡವೆಗಳನ್ನು ಅಡವಿಟ್ಟು ಸಾಲ ತಂದಿದ್ದಾರೆ. ಸಚಿವರು ಬಿಲ್ ಹಣಕ್ಕಾಗಿ ಸಾಕಷ್ಟು ಬಾರಿ ಅಲೆದಾಡಿಸಿದ್ದಾರೆ, ಇನ್ನೊಂದು ಕಡೆ ಸಾಲ ಕೊಟ್ಟವರು ಹಣ ಮರುಪಾವತಿಸುವಂತೆ ಒತ್ತಡ ಹೇರಿದ್ದಾರೆ. ಇದರಿಂದ ನೊಂದು ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣದ ದೂರಿನಲ್ಲಿ ಸಚಿವರ ವಿರುದ್ಧ ಭ್ರಷ್ಟಾಚಾರ ನಡೆಸಿರುವ ಆರೋಪ ಸ್ಪಷ್ಟವಾಗಿರುವುದರಿಂದ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7(ಚಿ) ಹಾಗೂ 13 ಕ್ಲಾಸ್ 1ರಡಿ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕಿತ್ತು. ಇದನ್ನು ಉದ್ದೇಶಪೂರ್ವಕವಾಗಿ ಕೈಬಿಟ್ಟು ಸೆಕ್ಷನ್ 34 ಹಾಗೂ 306 ರಡಿ ಕೇಸ್ ದಾಖಲಿಸಿದ್ದಾರೆ. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ -13 ರಡಿ ಪ್ರಕರಣ ದಾಖಲು ಮಾಡಬೇಕು. ಈಗ ಕೇವಲ ಸೆಕ್ಷನ್ 34 ಹಾಗೂ 306 ರಡಿ ಕೇಸ್ ದಾಖಲಾಗಿದೆ ಎಂದು ಹೇಳಿದರು.

‘ಇದೊಂದು ಅಮಾನವೀಯ ಅಪರಾಧ, ಇಂತಹ ಅಪರಾಧ ಪ್ರಕರಣಗಳಲ್ಲಿ ಎಫ್‍ಐಆರ್ ಆದ ಕೂಡಲೇ ಅಪರಾಧಿಯನ್ನು ಬಂಧಿಸಬೇಕು ಎಂದು ಈ ನೆಲದ ಕಾನೂನು ಹೇಳುತ್ತದೆ, ಹಾಗಾಗಿ ಈ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ಸಂತೋಷ್ ತಾಯಿ ಮತ್ತು ಪತ್ನಿಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿ, ನ್ಯಾಯ ಕೊಡಿಸುವ ಭರವಸೆ ನೀಡಿದ್ದೇವೆ. ಸಂತೋಷ್ ಕುಟುಂಬಸ್ಥರಿಗೆ 1 ಕೋಟಿ ರೂ. ಪರಿಹಾರ ನೀಡಬೇಕು, ಮೃತನ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರಕಾರಿ ಉದ್ಯೋಗ ನೀಡಬೇಕು. ಒಂದು ವೇಳೆ ಇದು ವಿಳಂಬವಾದರೆ ಪಕ್ಷದ ಮುಖಂಡರು ಆಕೆಗೆ ತಾತ್ಕಾಲಿಕ ಉದ್ಯೋಗ ನೀಡುತ್ತಾರೆ. ಜೊತೆಗೆ ನಾಳೆ ಡಿ.ಕೆ.ಶಿವಕುಮಾರ್ ಪಕ್ಷದ ವತಿಯಿಂದ ಮೃತರ ಕುಟುಂಬಕ್ಕೆ 11ಲಕ್ಷ ರೂ.ಚೆಕ್ ಅನ್ನು ನೀಡಲಿದ್ದಾರೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ: ‘ಸಂತೋಷ್ ಪಾಟೀಲ್ ಪೂರ್ಣಗೊಳಿಸಿರುವ ಕಾಮಗಾರಿಯ ಒಟ್ಟು 4 ಕೋಟಿ ರೂ.ಬಿಲ್ ಅನ್ನು ರಾಜ್ಯ ಸರಕಾರ ಕೂಡಲೇ ಪಾವತಿ ಮಾಡಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ನಾವು 4 ಗಂಟೆಗಳ ಕಾಲ ಅಹೋರಾತ್ರಿ ಧರಣಿ ಮಾಡಿದ್ದೇವೆ, ನಾಳೆಯಿಂದ 9 ತಂಡಗಳಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿ ನಂತರ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡುತ್ತೇವೆ' ಎಂದು ಅವರು ತಿಳಿಸಿದರು.

‘ಸಂತೋಷ್ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ಆಗಬೇಕು. ಸ್ವತಃ ಸಿಎಂ ಅವರೇ, ಈಶ್ವರಪ್ಪ ಅಮಾಯಕ ಎಂಬಂತ ಹೇಳಿಕೆ ನೀಡಿದ್ದಾರೆ, ಹಾಗಾಗಿ ರಾಜ್ಯ ಸರಕಾರ ನಡೆಸುವ ತನಿಖೆಯಿಂದ ನ್ಯಾಯ ಸಿಗುವ ಯಾವುದೇ ನಂಬಿಕೆ ಇಲ್ಲ. ಹೈಕೋರ್ಟ್‍ನ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆಯಾಗಬೇಕು. ಏಕೆಂದರೆ ಈಶ್ವರಪ್ಪ ಸಾಮಾನ್ಯ ಮನುಷ್ಯ ಅಲ್ಲ, ಅವರು ಸಾಕ್ಷ್ಯನಾಶ ಮಾಡುವ, ಪ್ರತ್ಯಕ್ಷ ಸಾಕ್ಷಿಗಳಿಗೆ ಬೆದರಿಸುವ ಸಾಧ್ಯತೆಗಳು ಇವೆ. ಗ್ರಾಮ ಪಂಚಾಯತಿ ಅಧ್ಯಕ್ಷ ನಾನೆ ಈಶ್ವರಪ್ಪ ಬಳಿಗೆ ಸಂತೋಷ್-+ ಪಾಟೀಲರನ್ನು ಕರೆದುಕೊಂಡು ಹೋಗಿದ್ದೆ ಎಂದಿದ್ದಾರೆ, ನಾಳೆ ಇವರಿಗೆ ಈಶ್ವರಪ್ಪ ಬೆದರಿಕೆ ಹಾಕಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X