ಉಡುಪಿಗೆ ಎಡಿಜಿಪಿ ಆಗಮನ, ಪೋಲಿಸ್ ಅಧಿಕಾರಿಗಳೊಂದಿಗೆ ಸಭೆ
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

ಉಡುಪಿ, ಎ.16: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪ್ರತಾಪ್ ರೆಡ್ಡಿ ಶನಿವಾರ ಉಡುಪಿಗೆ ಆಗಮಿಸಿದ್ದಾರೆ.
ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ ಎಡಿಜಿಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ತನಿಖೆಗೆ ಸಂಬಂಧಿಸಿ ಹೆಚ್ಚುವರಿ ತಂಡಗಳನ್ನು ಕೂಡ ರಚಿಸಲಾಗಿದೆ.
ಸಭೆಯಲ್ಲಿ ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಎಸ್ ಟಿ.ಸಿದ್ದಲಿಂಗಪ್ಪ, ತನಿಖಾಧಿಕಾರಿ ಪ್ರಮೋದ್ ಕುಮಾರ್ ಮೊದಲಾದ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
Next Story