ಉಡುಪಿ : ಮುಸ್ಲಿಂ ವಿರೋಧಿ ಹಿಂಸಾಚಾರದ ವಿರುದ್ಧ ಪಿಎಫ್‌ಐ ಪ್ರತಿಭಟನೆ

ಉಡುಪಿ : ಮುಸ್ಲಿಂ ವಿರೋಧಿ ಸಂಘಪರಿವಾರದ ಹಿಂಸಾಚಾರದ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಫ್‌ಐ ಉಡುಪಿ ಜಿಲ್ಲಾಧ್ಯಕ್ಷ ಫಯಾಜ್ ಅಹ್ಮದ್, ಸಂಘಪರಿ ವಾರ ದೇಶದಾದ್ಯಂತ ರಾಮನವಮಿ ಹೆಸರಿನಲ್ಲಿ ರ್ಯಾಲಿಯನ್ನು ನಡೆಸಿ ಮುಸ್ಲಿಂ ಬಾಹುಳ್ಯದ ಪ್ರದೇಶ ಗಳಲ್ಲಿ ಗಲಭೆ ಗಳನ್ನು ಸೃಷ್ಟಿಸುವ ಮೂಲಕ ಮುಸ್ಲಿಮರ ವಿರುದ್ಧ ವ್ಯವಸ್ಥಿತ ದಾಳಿ ನಡೆಸಿ ಹಿಂಸಾಚಾರವನ್ನು ನಡೆಸುತ್ತಿದೆ ಎಂದು ಆರೋಪಿಸಿದರು.
ಪಿಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಮುಖಂಡ ಹನೀಫ್ ಕಾಟಿಪಳ್ಳ ಮಾತ ನಾಡಿದರು. ಈ ಸಂದರ್ಭದಲ್ಲಿ ಪಿಎಫ್‌ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಶುಕೂರ್ ಉಪಸ್ಥಿತರಿದ್ದರು. ಅರ್ಷದ್ ಕಾರ್ಯಕ್ರಮ ನಿರೂಪಿಸಿದರು.
Next Story