ಮಂಗಳೂರು : ಗಾಂಜಾ ಸೇವನೆ ಮಾಡಿದ್ದ ಆರೋಪದ ಮೇರೆಗೆ ರಾಮಕೃಷ್ಣ(24) ಎಂಬಾತನನ್ನು ಕಾವೂರು ಪೊಲೀಸರು ನಗರದ ಬೋಂದೆಲ್ ಮೈದಾನದ ಬಳಿ ಶುಕ್ರವಾರ ಬಂಧಿಸಿದ್ದಾರೆ.
ಸಾರ್ವಜನಿಕರು ನೀಡಿದ ಮಾಹಿತಿಯಂತೆ ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.