Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ಸಿಗರು ತಮ್ಮ ಕಪಾಟುಗಳಲ್ಲಿ...

ಕಾಂಗ್ರೆಸ್ಸಿಗರು ತಮ್ಮ ಕಪಾಟುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳ ಲೆಕ್ಕಹಾಕಲಿ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 April 2022 8:58 PM IST
share
ಕಾಂಗ್ರೆಸ್ಸಿಗರು ತಮ್ಮ ಕಪಾಟುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳ ಲೆಕ್ಕಹಾಕಲಿ: ಸಿಎಂ ಬೊಮ್ಮಾಯಿ

ಬೆಂಗಳೂರು, ಎ. 16: ‘ಭ್ರಷ್ಟಾಚಾರದ ವಿರುದ್ಧ ಯಾತ್ರೆ ಹೊರಟಿರುವ ಕಾಂಗ್ರೆಸ್ಸಿನವರು ತಮ್ಮ ಕಪಾಟು(ಬೀರು)ಗಳಲ್ಲಿರುವ ಭ್ರಷ್ಟಾಚಾರದ ಅಸ್ಥಿಪಂಜರಗಳು ಎಷ್ಟಿವೆ ಎಂದು ಮೊದಲು ಲೆಕ್ಕಹಾಕಿಕೊಳ್ಳಲಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಶನಿವಾರ ನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಮುಖಂಡರು ಶುದ್ಧಹಸ್ತರು, ಪವಿತ್ರ ಹಸ್ತದವರು. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದು, ಯಾತ್ರೆ ಹೊರಟಿದ್ದಾರೆ. ಜನಕ್ಕೆ ಎಲ್ಲವೂ ಗೊತ್ತಿದೆ. ಇದ್ಯಾವುದರಿಂದಲೂ ಪ್ರಯೋಜನವಾಗುವುದಿಲ್ಲ ಎಂದು ಗೊತ್ತಿದೆ' ಎಂದು ಟೀಕಿಸಿದರು.

ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷವನ್ನು ಬಹಳ ವರ್ಷಗಳಿಂದ ನೋಡಿದ್ದಾರೆ. ಯಾವ ಯಾವ ಹಗರಣಗಳಾಗಿವೆ ಎಂದು ಅವರಿಗೆ ತಿಳಿದಿದೆ. ನಾವೂ ಜನರ ಮುಂದೆ ಅವರು ಮಾಡಿರುವ ಹಗರಣಗಳನ್ನು ಇಡಬೇಕಾದ ಕಾಲ ಬರುತ್ತಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಕೇಸು ಹಾಕಿಲ್ಲ. ಸಂತೋಷ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪ ಇದ್ದು, ತನಿಖೆಯಾಗುತ್ತಿದೆ. ಶವಪರೀಕ್ಷೆಯ ನಂತರ ಬರುವ ಎಫ್‍ಎಸ್‍ಎಲ್ ವರದಿ ಆಧಾರದ ಮೇಲೆ ವೈಜ್ಞಾನಿಕವಾಗಿ ಏನು ನಡೆಯಿತು ಎಂದು ಗೊತ್ತಾಗಲಿದೆ ಎಂದು ವಿವರಣೆ ನೀಡಿದರು. 

ಹಸ್ತಕ್ಷೇಪ ಮಾಡಿಲ್ಲ: ‘ಸಿದ್ದರಾಮಯ್ಯ ಅವರು ಕೆ.ಜೆ.ಜಾರ್ಜ್ ವಿಚಾರದಲ್ಲಿ ವಿಡಿಯೋ ಹಾಗೂ ಮರಣ ಪತ್ರವೂ ಇತ್ತು. ಆದರೆ ಎಫ್‍ಐಆರ್ ನಲ್ಲಿ ಹೆಸರು ಬಂದಿತ್ತಾ? ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡಲಿಲ್ಲವೇ? ಕೋರ್ಟ್‍ನಿಂದ ಆದೇಶ ಬಂದ ನಂತರ ಎಫ್‍ಐಆರ್ ಆಯಿತು. ಅವರ ಮನೆಯವರು ಕೋರ್ಟಿಗೆ ಹೋಗಬೇಕಾಯಿತು ಎಫ್‍ಐಆರ್ ಆಗಲು. ಆದರೆ ನಾವು ದೂರಿನ ಮೇಲೆ ಎಫ್‍ಐಆರ್ ದಾಖಲಿಸಿ ತನಿಖೆ ಮಾಡಿಸುತ್ತಿದ್ದೇವೆ ಎಂದು ಸ್ಪಷ್ಟಣೆ ನೀಡಿದರು.

ಈ ಪ್ರಕರಣದ ತನಿಖೆಯ ಆಧಾರದ ಮೇಲೆ ಮುಂದಿನ ಸೆಕ್ಷನ್‍ಗಳನ್ನು ಹಾಕಲಾಗುವುದು. ತನಿಖೆಯಾಗಲು ಬಿಡಿ. ಯಾವಾಗ ಯಾವ ಸೆಕ್ಷನ್ ಹಾಕಬೇಕು ಎನ್ನುವುದು ಕಾನೂನು ಬದ್ಧವಾಗಿ ಆಗುತ್ತದೆ. ನಾವು ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಕಾನೂನು ಇದೆ, ತನಿಖೆಯಾಗುತ್ತದೆ. ಚಾರ್ಚ್‍ಶೀಟ್ ಆದ ಮೇಲೆ ಕೋರ್ಟಿನಲ್ಲಿ ಸರಿ ಇದೆಯೇ ಎಂದು ಮತ್ತೊಮ್ಮೆ ವಿಶ್ಲೇಷಣೆ ಆಗುತ್ತದೆ. ನಮ್ಮಲ್ಲಿರುವ ವ್ಯವಸ್ಥೆ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಪ್ರಾಥಮಿಕ ತನಿಖೆಯಾದ ನಂತರ ಉನ್ನತ ಮಟ್ಟದ ತನಿಖೆ ವಹಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X