ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ತರಬೇತಿ
ಉಡುಪಿ : ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್ ಗಳಿಗೆ ಎರಡು ದಿನದ ತರಬೇತಿ ಕಾರ್ಯಾಗಾರವು ಎ.೧೮ ಮತ್ತು ೧೯ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಸರ್ ಜೀನ್ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್‌ನ ಪ್ರಕಟಣೆ ತಿಳಿಸಿದೆ.
Next Story





