Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ...

ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 April 2022 11:53 AM IST
share
ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ: ಕುಮಾರಸ್ವಾಮಿ

ಬೆಂಗಳೂರು : ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಅವರು, ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ.

ಕಿಡಿಗೇಡಿ, ತಿಳಿಗೇಡಿ ಯುವಕನ ಕೃತ್ಯದಿಂದ ಉದ್ರಿಕ್ತಗೊಂಡ ಇನ್ನೊಂದು ಸಮುದಾಯದ ಕೆಲವರು ರಾತ್ರಿಯೆಲ್ಲ ಹುಬ್ಬಳ್ಳಿಯಲ್ಲಿ ಬೀಭತ್ಸ ಸೃಷ್ಟಿಸಿ ದ್ವೇಷದ ಬೆಂಕಿಗೆ ಪೆಟ್ರೋಲ್‌ ಸುರಿಯದೇ ಸಹನೆ ಮೆರೆಯಬೇಕಿತ್ತು. ಪೊಲೀಸರ ಮೇಲೆ ದಾಳಿ, ಠಾಣೆ ಮತ್ತು ಆಸ್ಪತ್ರೆ ಮೇಲೆ ಕಲ್ಲುಗಳನ್ನು ಎಸೆದು ಹಾನಿ ಮಾಡಬಾರದಿತ್ತು.

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ.

ಅನುಭವದಿಂದ ಪಾಠ ಕಲಿಯುತ್ತಿಲ್ಲ ಎನ್ನುವುದಕ್ಕೆ ಹುಬ್ಬಳ್ಳಿ ಘಟನೆ ಒಂದು ನಿದರ್ಶನ. ಹಿಂದೆ ಬೆಂಗಳೂರಿನಲ್ಲಿ ಕಿಡಿಗೇಡಿ ಯುವಕನೊಬ್ಬ ಒಂದು ಧರ್ಮಗುರುವಿನ ಬಗ್ಗೆ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಪರಿಣಾಮ, ಶಾಸಕರೊಬ್ಬರ ಮನೆ, ಡಿಜೆ ಹಳ್ಳಿ ಪೊಲೀಸ್‌ ಠಾಣೆಯೇ ಬೆಂಕಿಗೆ ಆಹುತಿಯಾಗಿತ್ತು.

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು.

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್‌ʼಕಿಟ್‌ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ

ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್‌ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ.

ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಈದ್ಗಾ ಮೈದಾನದ ವಿವಾದಕ್ಕೆ ತೆರೆಬಿದ್ದ ನಂತರ ನೆಮ್ಮದಿಯಾಗಿದ್ದ ಹುಬ್ಬಳ್ಳಿಯ ಶಾಂತ ವಾತಾವರಣ ಕದಡುವ ಷಡ್ಯಂತ್ರವನ್ನು ಯಾರೂ ಸಹಿಸಬಾರದು. ಸಾಮರಸ್ಯ ಮೂಡಿಸಬೇಕಾದ ಜಾಲತಾಣದಲ್ಲಿ ಒಂದು ಧರ್ಮದ ಯುವಕ ಹಂಚಿಕೊಂಡ ಪ್ರಚೋದನಾತ್ಮಕ ಪೋಸ್ಟ್‌ ರಾದ್ಧಾಂತಕ್ಕೆ ಕಾರಣ. 2/10

— H D Kumaraswamy (@hd_kumaraswamy) April 17, 2022

ಕಿಡಿಗೇಡಿ ಯುವಕನ ಬಂಧನವಾಗಿದೆ. ಕಾನೂನು ಅವನನ್ನು ನೋಡಿಕೊಳ್ಳುತ್ತದೆ. ಇನ್ನೊಂದು ಸಮುದಾಯವು ಕಾನೂನನ್ನು ಕೈಗೆತ್ತಿಕೊಳ್ಳದೆ ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಸಹನೆಯಿಂದ ವರ್ತಿಸಬೇಕು. ಕಳೆದ ಕೆಲ ದಿನಗಳಿಂದ ಕರ್ನಾಟಕ ಕೋಮುದಳ್ಳುರಿಯಲ್ಲಿ ಬೇಯುತ್ತಿದೆ, ಎಲ್ಲರಿಗೂ ನೋವಾಗುತ್ತಿದೆ. ಅದು ಮುಂದುವರಿಯುವುದು ಬೇಡ. 4/10

— H D Kumaraswamy (@hd_kumaraswamy) April 17, 2022

ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್‌ ಆಯುಕ್ತರು ಹಾಗೂ ಇಡೀ ಪೊಲೀಸ್‌ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 6/10

— H D Kumaraswamy (@hd_kumaraswamy) April 17, 2022

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್‌ ಮೀಡಿಯಾ ಹಿಂಸೆ ಹರಡುವ ಟೂಲ್‌ʼಕಿಟ್‌ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ 8/10

— H D Kumaraswamy (@hd_kumaraswamy) April 17, 2022

ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್‌ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ. 10/10#ಸರ್ವ_ಜನಾಂಗದ_ಶಾಂತಿಯ_ತೋಟ

— H D Kumaraswamy (@hd_kumaraswamy) April 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X