ಅಂಬಲಪಾಡಿ: ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ : ಯಕ್ಷಗಾನ ಕಲಾರಂಗ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ಅಂಬಲಪಾಡಿ ದೇವಳದ ಭವಾನಿ ಮಂಟಪ ದಲ್ಲಿ ಹಮ್ಮಿ ಕೊಳ್ಳಲಾಗಿರುವ ಐದು ದಿನಗಳ ಸನಿವಾಸ ಶಿಬಿರವನ್ನು ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಶನಿವಾರ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಿಎ ನಂದಗೋಪಾಲ ಶೆಣೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಗ್ಲೋಬಲ್ ಐಟಿ ನಿರ್ದೇಶಕ ಅರುಂಧತಿ ರಾವ್, ನ್ಯಾಯವಾದಿ ಎ.ಸಂಕಪ್ಪ, ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ, ಸಿಂಗಾಪುರದ ತಂತ್ರಜ್ಞ ಎ.ವೈ.ಮೋಹನ್, ಹುಬ್ಬಳ್ಳಿಯ ಮೈಲೈಫ್‌ನ ಸ್ಥಾಪಕ, ಶಿಬಿರದ ನಿರ್ದೇಶಕ ಪ್ರವೀಣ್ ಗುಡಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಿಎ ಓದುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಕವನಾ ಅವರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಸಂಸ್ಥೆಯ ಉಪಾಧ್ಯಾಕ್ಷರಾದ ಎಸ್.ವಿ.ಭಟ್, ವಿ.ಜಿ.ಶೆಟ್ಟಿ, ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ್, ಮನೋಹರ್ ಕೆ., ದಾನಿಗಳಾದ ವಿಲಾಸಿನಿ ಬಿ.ಶೆಣೈ, ರಂಗಪ್ಪಯ್ಯ ಹೊಳ್ಳ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾದ ಅನಂತರಾಜ ಉಪಾ ಧ್ಯಾಯ, ಕಿಶೋರ್ ಸಿ.ಉದ್ಯಾವರ, ಗಣೇಶ್ ರಾವ್ ಎಲ್ಲೂರು, ಕೆ.ಅಜಿತ್ ಕುಮಾರ್, ಎಚ್.ಎನ್.ವೆಂಕಟೇಶ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿ ದರು. ಎ.ನಟರಾಜ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಎಂ. ವಂದಿಸಿದರು. ಶಿಬಿರದಲ್ಲಿ ೨೩೦ ವಿದ್ಯಾರ್ಥಿಗಳು ಭಾಗವಹಿಸಿದ್ದರು.