Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯಲ್ಲಿ...

ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯಲ್ಲಿ ಹಿಂದೆಂದೂ ಈ ರೀತಿಯ ಅರಾಜಕತೆ ಕಂಡಿರಲಿಲ್ಲ: ಸಿದ್ದರಾಮಯ್ಯ

''ಹುಬ್ಬಳ್ಳಿ ಗಲಭೆಗೆ ಹೊಣೆಗಾರರಾಗಿರುವ ಕಿಡಿಗೇಡಿಗಳ ಜಾತಿ, ಧರ್ಮ, ಪಕ್ಷ ನೋಡದೇ ಬಂಧಿಸಿ''

ವಾರ್ತಾಭಾರತಿವಾರ್ತಾಭಾರತಿ17 April 2022 9:18 PM IST
share
ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯಲ್ಲಿ ಹಿಂದೆಂದೂ ಈ ರೀತಿಯ ಅರಾಜಕತೆ ಕಂಡಿರಲಿಲ್ಲ: ಸಿದ್ದರಾಮಯ್ಯ

ಬೆಂಗಳೂರು: 'ಹುಬ್ಬಳ್ಳಿಯಲ್ಲಿ ನಡೆದಿರುವ ಘಟನೆಗಳು ಅತ್ಯಂತ ಖಂಡನೀಯ. ಇದಕ್ಕೆ ಹೊಣೆಗಾರರಾಗಿರುವ ಕಿಡಿಗೇಡಿಗಳು ಯಾವುದೇ ಜಾತಿ, ಧರ್ಮ ಇಲ್ಲವೇ ಪಕ್ಷದವರೇ ಆಗಿರಲಿ ಪೊಲೀಸರು ಅವರನ್ನು ಬಂಧಿಸಿ ಅಲ್ಲಿನ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು. ಪೊಲೀಸರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಸಂಬಂಧ ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು,  'ಕೋಮುದ್ವೇಷವನ್ನು ಹುಟ್ಟುಹಾಕಿ, ಹರಡುವ ಮೂಲಕ ರಾಜ್ಯದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕೆಡಿಸುವ ಹುನ್ನಾರವನ್ನು ಸಮಾಜವಿರೋಧಿ ಶಕ್ತಿಗಳು ಸತತವಾಗಿ ನಡೆಸುತ್ತಾ ಬಂದಿರುವುದನ್ನು ಕಾಣಬಹುದು. ಇದು ಕೇವಲ ಆಕಸ್ಮಿಕವಾದ ಘಟನೆಗಳಾಗಿರದೆ ಇದರ ಹಿಂದೆ ಯೋಜಿತ ಕಾರ್ಯಸೂಚಿ ಇದ್ದ ಹಾಗೆ ಕಾಣುತ್ತಿದೆ' ಎಂದು ಆರೋಪಿಸಿದರು. 

'ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯಲ್ಲಿ ಹಿಂದೆಂದೂ ಈ ರೀತಿಯ ಅರಾಜಕತೆ ಕಂಡಿರಲಿಲ್ಲ. ಇದಕ್ಕೆ ಅಸಮರ್ಥ ಮತ್ತು ದುರ್ಬಲ ಗೃಹಸಚಿವರೇ ಮುಖ್ಯ ಕಾರಣ ಎನ್ನುವುದು ನಿರ್ವಿವಾದ. ಈ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಸಮಾಜವಿರೋಧಿ ಶಕ್ತಿಗಳು ಬೀದಿಗಳಿಯುತ್ತಿರುವಂತೆ ಕಾಣುತ್ತಿದೆ' ಎಂದು ಅಭಿಪ್ರಾಯಿಸಿದರು. 

ರಾಜ್ಯದ ಕೆಲವು ಸಚಿವರು ಮತ್ತು ಆಡಳಿತಾರೂಢ ಪಕ್ಷದ ನಾಯಕರು ಪೊಲೀಸರ ಕಾರ್ಯನಿರ್ವಹಣೆಯಲ್ಲಿ ಮತ್ತೆ ಮತ್ತೆ ಮಧ್ಯಪ್ರವೇಶಿಸಿ, ತಮಗೆ ಅನುಕೂಲವಾಗುವಂತೆ ಕೆಲಸ ಮಾಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಇದರಿಂದ ಪೊಲೀಸರು ನೈತಿಕವಾಗಿ ಕುಸಿದುಹೋಗಿದ್ದಾರೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆ ಎಂದರು. 

ರಾಜಕೀಯದ ಒತ್ತಡಕ್ಕೆ ಮಣಿದು ಪೊಲೀಸರು ಅಮಾಯಕರನ್ನು ಬಂಧಿಸುವ ಮತ್ತು ತನಿಖೆಯನ್ನೇ ನಡೆಸದೆ ಅಪರಾಧಿಗಳ ಹೆಸರನ್ನು ಮಾಧ್ಯಮಕ್ಕೆ ತಿಳಿಸುವ ಕೆಲಸವನ್ನು ಮಾಡಬಾರದು. ಇದರಿಂದ ಪರಿಸ್ಥಿತಿ ಉಲ್ಭಣಗೊಂಡರೆ ಅದರ ನಿಯಂತ್ರಣದ ಭಾರ ತಮ್ಮ ಮೇಲೆಯೇ ಬೀಳಲಿದೆ ಎಂಬ ಎಚ್ಚರ ಪೊಲೀಸರಿಗೂ ಇರಬೇಕಾಗುತ್ತದೆ ಎಂದು ತಿಳಿಸಿದರು.

'ಅಪರಾಧಿಗಳು ಕೇವಲ ಅಪರಾಧಿಗಳು, ಅವರಿಗೆ ಜಾತಿ, ಧರ್ಮಗಳಿರುವುದಿಲ್ಲ. ಇದನ್ನು ಸರ್ಕಾರ, ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಮೊದಲು ತಿಳಿದುಕೊಳ್ಳಬೇಕು. ಯಾರದೋ ಪ್ರಚೋದನೆಯಿಂದ ವಿವೇಚನೆಯನ್ನು ಕಳೆದುಕೊಂಡು ಸಿಟ್ಟಿನ ಕೈಗೆ ವಿವೇಕವನ್ನು ಕೊಡಬಾರದು, ಇಂತಹ ಸಂದರ್ಭಗಳನ್ನು ಸಹನೆ, ಸಂಯಮಗಳ ಮೂಲಕ ಎದುರಿಸಬೇಕು' ಎಂದರು. 

'ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ. ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ. ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ. ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ' ಎಂದು ಸ್ಪಷ್ಟಪಡಿಸಿದರು.

ಅಪರಾಧದ ಪ್ರಶ್ನೆ ಎದುರಾದಾಗ ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಧರ್ಮದ ಪರವಾಗಿ ಇರುವುದಿಲ್ಲ. ನಾವು ಸತ್ಯ, ನ್ಯಾಯ ಮತ್ತು ನೆಲದ ಕಾನೂನಿಗೆ ಬದ್ಧ. ಪೊಲೀಸರು ನೆಲದ ಕಾನೂನಿಗೆ ನಿಷ್ಠರಾಗಿ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲ ಇದೆ. ರಾಜಕೀಯ ಪೂರ್ವಗ್ರಹಪೀಡಿತರಾಗಿ ಕೈಗೊಳ್ಳುವ ನಿರ್ಧಾರಗಳಿಗಷ್ಟೇ ನಮ್ಮ ವಿರೋಧವಿದೆ. 7/7#Hubli

— Siddaramaiah (@siddaramaiah) April 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X