Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್19 ಸಾವಿನ ಸಂಖ್ಯೆಯ ಏಣಿಕೆಗೆ...

ಕೋವಿಡ್19 ಸಾವಿನ ಸಂಖ್ಯೆಯ ಏಣಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಬಳಸುವ ವಿಧಾನಕ್ಕೆ ಭಾರತ ವಿರೋಧ

ವಾರ್ತಾಭಾರತಿವಾರ್ತಾಭಾರತಿ17 April 2022 10:07 PM IST
share
ಕೋವಿಡ್19 ಸಾವಿನ ಸಂಖ್ಯೆಯ ಏಣಿಕೆಗೆ ವಿಶ್ವ ಆರೋಗ್ಯ ಸಂಸ್ಥೆ ಬಳಸುವ ವಿಧಾನಕ್ಕೆ ಭಾರತ ವಿರೋಧ

ಹೊಸದಿಲ್ಲಿ, ಎ.17: ದೇಶದಲ್ಲಿ ಕೋವಿಡ್19 ನಿಂ ಮೃತಪಟ್ಟವರ ಸಂಖ್ಯೆಯನ್ನು ಅಂದಾಜಿಸಲು ವಿಶ್ವ ಆರೋಗ್ಯ ಸಂಸ್ಥೆಯು (ಡಬ್ಲುಎಚ್ಓ) ಅನುಸರಿಸುತ್ತಿರುವ ವಿಧಾನವನ್ನು ಭಾರತವು ಪ್ರಶ್ನಿಸಿದೆ. ಭೌಗೋಳಿಕವಾಗಿ ವಿಶಾಲವಾದ ಗಾತ್ರ ಹಾಗೂಅಪಾರ ಜನಸಂಖ್ಯೆಯನ್ನು ಹೊಂದಿರುವ ಈ ದೇಕ್ಕೆ ಇಂತಹ ಗಣಿತಶಾಸ್ತ್ರೀಯ ವಿಧಾನ (ಮ್ಯಾಥಮ್ಯಾಟಿಕಲ್ ಮಾಡೆಲಿಂಗ್)ವನ್ನು ಅನ್ವಯಿಸಲು ಸಾಧ್ಯವಿಲ್ಲವೆಂದು ಆದು ಹೇಳಿದೆ.

‘‘ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಡಬ್ಲುಎಚ್ಓ ಪ್ರಯತ್ನಗಳಿಗೆ ಭಾರತ ತಡೆಯೊಡ್ಡುತ್ತಿದೆ’’ ಎಂಬ ಶೀರ್ಷಿಕೆಯೊಂದಿಗೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಶನಿವಾರ ಈ ಹೇಳಿಕೆಯನ್ನು ಬಿಡುಗಡೆಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆಯನ್ನು ಲೆಕ್ಕ ಹಾಕಲು ಬಳಸಲಾಗುತ್ತಿರವ ವಿಧಾನದ ಬಗ್ಗೆ ತನ್ನ ಕಳವಳವನ್ನು ತಾನು ಹಲವಾರು ಸಂದರ್ಭಗಳಲ್ಲಿ ಡಬ್ಲುಎಚ್ಓ ಜೊತೆ ಹಂಚಿಕೊಂಡಿರುವುದಾಗಿ ಅದು ಹೇಳಿಕೆಯಲ್ಲಿ ತಿಳಿಸಿದೆ.

ಕೋವಿಡ್19 ಸಾವಿನ ಸಂಖ್ಯೆಗಳ ಕುರಿತು ಮೊದಲನೆ ಸ್ತರದ ದೇಶಗಳಿಂದ ಸಂಗ್ರಹಿಸುವ ದತ್ತಾಂಶಗಳಿಗೂ, ಭಾರತದ ರಾಜ್ಯಗಳಲ್ಲಿ ದತ್ತಾಂಶ ಸಂಗ್ರಹಕ್ಕೂ ಏಕ ರೀತಿಯ ವಿಧಾನವನ್ನು ಅನುಸರಿಸುವುದರಿಂದ ಸಾವಿನ ಸಂಖ್ಯೆಯನ್ನು ತಪ್ಪಾಗಿ ಅಂದಾಜಿಸುವ ಸಾಧ್ಯತೆಯಿರುತ್ತದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

 ಕೋವಿಡ್ ಸಾವಿನ ಸಂಖ್ಯೆಯನ್ನು ಏಣಿಸಲು ಬಳಸಲಾಗುತ್ತಿರುವ ವಿಧಾನಶಾಸ್ತ್ರ (ಮೆಥಡಾಲಜಿ)ದ ಬಗ್ಗೆ ತನ್ನ ಕಳವಳವನ್ನು ಭಾರತವು ಇತರ ಸದಸ್ಯ ರಾಷ್ಟ್ರಗಳ ಜೊತೆ ಔಪಚಾರಿಕ ಸಂವಹನಗಳ ಮೂಲಕ ಹಂಚಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಗೆ ಈ ಕುರಿತಾಗಿ ಆರು ಪತ್ರಗಳನ್ನು (2021ರಲ್ಲಿ ನವೆಂಬರ್ 17, ಡಿಸೆಂಬರ್ 29 ಹಾಗೂ ಡಿಸೆಂಬರ್ 28ರಲ್ಲಿ; 2022ರಲ್ಲಿ ಜನವರಿ 11, ಫೆಬ್ರವರಿ 12 ಹಾಗೂ ಮಾರ್ಚ್ 2) ಬರೆದಿರುವುದಾಗಿ ಅದು ಹೇಳಿದೆ.

ಕೋವಿಡ್ನಿಂದ ಸಂಭವಿಸಿದ ಸಾವಿನ ಸಂಖ್ಯೆಗಳನ್ನು ಲೆಕ್ಕಹಾಕಲು ಬಳಸಲಾಗುವ ವಿಧಾನಸಾಸ್ತ್ರ ಹಾಗೂ ಅನಧಿಕೃತ ದತ್ತಾಂಶಗಳ ಬಳಕೆಯನ್ನು ಭಾರತದ ಜೊತೆ ಇತರ ಸದಸ್ಯ ರಾಷ್ಟ್ರಗಳದ ಚೀನಾ, ಇರಾನ್, ಬಾಂಗ್ಲಾ, ಸಿರಿಯಾ, ಇಥಿಯೋಪಿಯಾ ಹಾಗೂ ಈಜಿಪ್ಟ್ ಕೂಡಾ ಪ್ರಶ್ನಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X