Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತ್ಯಸಂಸ್ಕಾರಕ್ಕೆ ಪರಿಸರಸ್ನೇಹಿ ವಿಧಾನ...

ಅಂತ್ಯಸಂಸ್ಕಾರಕ್ಕೆ ಪರಿಸರಸ್ನೇಹಿ ವಿಧಾನ ಉತ್ತೇಜಿಸಲು ರಾಜ್ಯಗಳಿಗೆ ಗ್ರೀನ್ ಟ್ರಿಬ್ಯೂನಲ್ ಕರೆ

ವಾರ್ತಾಭಾರತಿವಾರ್ತಾಭಾರತಿ17 April 2022 10:38 PM IST
share
ಅಂತ್ಯಸಂಸ್ಕಾರಕ್ಕೆ ಪರಿಸರಸ್ನೇಹಿ ವಿಧಾನ ಉತ್ತೇಜಿಸಲು ರಾಜ್ಯಗಳಿಗೆ ಗ್ರೀನ್ ಟ್ರಿಬ್ಯೂನಲ್ ಕರೆ

ಹೊಸದಿಲ್ಲಿ, ಎ.17: ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಪರಿಸರ ಸ್ನೇಹಿ ವಿಧಾನದತ್ತ ಹೊರಳಬೇಕೆಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್ಜಿಟಿ)ವು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಿರ್ದೇಶನ ನೀಡಿದೆ ಹಾಗೂ ವಾಯುಮಾಲಿನ್ಯ ನಿಯಂತ್ರಣಕ್ಕಾಗಿ  ಪಿಎನ್ಜಿ ಚಿತಾಗಾರಗಳನ್ನು ನಿರ್ಮಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸಬೇಕೆಂದು ಅದು ಸಲಹೆ ನೀಡಿದೆ.

ಕಟ್ಟಿಗೆಯ ಚಿತೆಯ ಮೂಲಕ ನೆರವೇರಿಸಲಾಗುವ ಪಾರ್ಥಿವ ಶರೀರದ ಅಂತ್ಯಸಂಸ್ಕಾರಕ್ಕೆ 350ರಿಂದ 450 ಕೆ.ಜಿ. ಕಟ್ಟಿಗೆಯ ಅಗತ್ಯವಿರುತ್ತದೆ ಎಂದು ಅದು ತಿಳಿಸಿದೆ. ಆದರೆ ತನಗೆ ಯಾವುದೇ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಉದ್ದೇಶವಿಲ್ಲವೆಂದು ನ್ಯಾಯಾಧೀಕರಣವು, ಸ್ಪಷ್ಟಪಡಿಸಿದೆ. ಇಂತಹ ವಾಯುಮಾಲಿನ್ಯವನ್ನು ತಡೆಗಟ್ಟಲು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತಗಳು ಪರಿಹಾರಾತ್ಮಕ ನಡೆಗಳನ್ನು ಇರಿಸುವ ಬಗ್ಗೆ ಪರಿಶೀಲಿಸಬೇಕು ಹಾಗೂ ಶವಸಂಸ್ಕಾರಕ್ಕೆ ಪರಿಸರ ಸ್ನೇಹಿ ವಿಧಾನಗಳತ್ತ ಹೊರಳುವಂತೆ ಜನರಿಗೆ ಅರಿವು ಮೂಡಿಸಬೇಕು ಹಾಗೂ ಅವರನ್ನು ಪ್ರೇರೇಪಿಸಬೇಕು ಎಂದು ಅದು ಹೇಲಿದೆ.

ಕಟ್ಟಿಗೆ ಆಧಾರಿತ ಚಿತಾಗಾರಕ್ಕೆ ಪರ್ಯಾಯ ಆಯ್ಕೆಯಾಗಿ ವಿದ್ಯುತ್/ಪಿಎನ್ಜಿ ಚಿತಾಗಾರಗಳನ್ನು ನಿರ್ಮಿಸಲು ರಾಜ್ಯ ಹಾಗೂ ಕೇಂದ್ರಾಡಳಿತಗಳು ಮುಂದಾಗಬೇಕು ಎಂದು ನ್ಯಾಯಾಧೀಕರಣ ತಿಳಿಸಿದೆ.

ಗಾಝಿಯಾಬಾದ್ನ ಇಂದಿರಾಪುರಂನ ಶಕ್ತಿ ಖಾಂಡ-4ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿತಾಗಾರದಲ್ಲಿ ಮೃತದೇಹಗಳ ಅಂತ್ಯಸಂಸ್ಕಾರದ ಸಂದರ್ಭ ಹೊರಹೊಮ್ಮುವ ಧೂಳು ಹಾಗೂ ಹೊಗೆಯಿಂದ ವಾಯುಮಾಲಿನ್ಯವುಂಟಾಗುತ್ತಿದ್ದು ಅದನ್ನು ತಡೆಗಟ್ಟಬೇಕೆಂದು ಕೋರಿ ರಿಯಲ್ ಆ್ಯಂಕರ್ಸ್ ಡೆವಲಪರ್ಸ್ ಪ್ರೈ. ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯ ಆಲಿಕೆಯನ್ನು ನ್ಯಾಯಾಧೀಕರಣವು ಕೈಗೆತ್ತಿಕೊಂಡ ಸಂದರ್ಭದಲ್ಲಿ ಅದು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X