ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ನಮ್ಮ ನಾಯಕಿಯಲ್ಲ: ಬಿಜೆಪಿ

ದಿವ್ಯಾ ಹಾಗರಗಿ
ಬೆಂಗಳೂರು, ಎ.18: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪಿ ಕಲಬುರಗಿಯ ಶಾಲೆಯೊಂದರ ಮುಖ್ಯಸ್ಥೆ ದಿವ್ಯಾ ಹಾಗರಗಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಅವರು ಪಕ್ಷದ ನಾಯಕಿಯಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದ್ದಾರೆ.
ದಿವ್ಯಾ ಹಾಗರಗಿ ಅಥವಾ ಯಾರೇ ಅಕ್ರಮದಲ್ಲಿ ಭಾಗಿಯಾಗಿದ್ದರೆ ಅದನ್ನು ಪಕ್ಷ ಮತ್ತು ಸರಕಾರ ಸಹಿಸಿಕೊಳ್ಳುವುದಿಲ್ಲ. ಅಕ್ರಮ ನಡೆದಿರುವುದು ಸಾಬೀತಾದರೆ ಶಿಕ್ಷೆ ಆಗಲಿದ. ಸರಕಾರವು ಈ ಅಕ್ರಮದ ಕುರಿತು ಸಿಐಡಿ ತನಿಖೆ ನಡೆಸಲು ಸೂಚಿಸಿದೆ ಎಂದು ತಿಳಿಸಿದ್ದಾರೆ.
Next Story





