Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎ.21ಕ್ಕೆ ಬೆಂಗಳೂರಿನಲ್ಲಿ ಬೃಹತ್ ರೈತ...

ಎ.21ಕ್ಕೆ ಬೆಂಗಳೂರಿನಲ್ಲಿ ಬೃಹತ್ ರೈತ ಹಾಗೂ ಜನಸಾಮಾನ್ಯರ ಸಮಾವೇಶ, ಅರವಿಂದ ಕೇಜ್ರಿವಾಲ್ ಭಾಗಿ

ವಾರ್ತಾಭಾರತಿವಾರ್ತಾಭಾರತಿ18 April 2022 5:52 PM IST
share
ಎ.21ಕ್ಕೆ ಬೆಂಗಳೂರಿನಲ್ಲಿ ಬೃಹತ್ ರೈತ ಹಾಗೂ ಜನಸಾಮಾನ್ಯರ ಸಮಾವೇಶ, ಅರವಿಂದ ಕೇಜ್ರಿವಾಲ್ ಭಾಗಿ

ಬೆಂಗಳೂರು, ಎ.18: ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಎ.21ರಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಮಾವೇಶದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಗಮಿಸಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ರಾಜ್ಯವನ್ನಾಳಿದ ಮೂರು ರಾಜಕೀಯ ಪಕ್ಷಗಳ ಕಾರ್ಯವೈಖರಿಯಿಂದ ರಾಜ್ಯದ ಜನರು ಬೇಸತ್ತು, ಪರ್ಯಾಯ ರಾಜಕೀಯ ವ್ಯವಸ್ಥೆಯನ್ನು ಬಯಸುತ್ತಿದ್ದಾರೆ. ನಾಡಿನ ಸುಮಾರು 50 ಸಾವಿರ ರೈತರು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಿದ್ದಾರೆ. ಈ ನಿಟ್ಟಿನಲ್ಲಿ ಅರವಿಂದ ಕೇಜ್ರಿವಾಲ್ ಭಾಗವಹಿಸುವ ರೈತ ಸಮಾವೇಶವು ಕರ್ನಾಟಕ ರಾಜಕೀಯ ಇತಿಹಾಸದಲ್ಲೇ ಮೈಲಿಗಲ್ಲಾಗುತ್ತದೆ ಎಂದು ಹೇಳಿದರು. 

ಜನಸಾಮಾನ್ಯರ ಕುಂದುಕೊರತೆಗಳನ್ನು ಅರಿತುಕೊಂಡು ಬದಲಾವಣೆ ತರುತ್ತಿರುವ ಏಕೈಕ ಪಕ್ಷವೆಂದರೆ ಆಮ್ ಆದ್ಮಿ ಪಕ್ಷ. ಪ್ರಾಮಾಣಿಕ ವ್ಯಕ್ತಿಗಳು ರಾಜಕಾರಣಕ್ಕೆ ಬಂದರೆ ಜನಪರ ಕೆಲಸಗಳನ್ನು ದೊಡ್ಡ ಮಟ್ಟದಲ್ಲಿ ಮಾಡಬಹುದು, ಭ್ರಷ್ಟಾಚಾರವಿಲ್ಲದ ಆಡಳಿತ ನೀಡಬಹುದು ಎಂಬುದನ್ನು ದೆಹಲಿಯ ಕೇಜ್ರಿವಾಲ್ ನೇತೃತ್ವದ ಸರಕಾರ ಕಳೆದ ಏಳು ವರ್ಷಗಳಲ್ಲಿ ತೋರಿಸಿಕೊಟ್ಟಿದೆ. ತೆರಿಗೆ ಹಣವು ಕಳ್ಳ ರಾಜಕಾರಣಿಗಳ ಜೇಬು ಸೇರುವುದನ್ನು ತಪ್ಪಿಸಿ, ಅಲ್ಲಿನ ಆರೋಗ್ಯ, ಶಿಕ್ಷಣ, ನೀರು, ವಿದ್ಯುತ್ ಮುಂತಾದ ಮೂಲಸೌಕರ್ಯ ನೀಡುವುದಕ್ಕೆ ಬಳಸಲಾಗಿದೆ ಎಂದು ಹೇಳಿದರು. ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, ಬೇರೆ ಪಕ್ಷದವರ ರೀತಿ ಎಎಪಿ ವ್ಯಕ್ತಿಯ ಬ್ಯಾಂಕ್ ಬ್ಯಾಲೆನ್ಸ್ ನೋಡುವುದಿಲ್ಲ. ಬದಲಾಗಿ, ಆತನ ಸಾಮಾಜಿಕ ಕಾಳಜಿ ಹಾಗೂ ಮತದಾರರ ಬಗ್ಗೆ ಇರುವ ಕಳಕಳಿಯನ್ನು ನೋಡುತ್ತದೆ. ಸಾಮಾನ್ಯರನ್ನು ನಾಯಕರನ್ನಾಗಿ ಮಾಡುವ ಎಎಪಿಯನ್ನು ಜನಸಾಮಾನ್ಯರು ಬಳಸಿಕೊಳ್ಳಬೇಕು ಎಂದರು.

ಗೋಷ್ಠಿಯಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ, ಮೋಹನ್ ದಾಸರಿ, ಸಂಚಿತ್ ಸೆಹ್ವಾನಿ, ಜಗದೀಶ್ ಸದಂ, ಬಿ.ಟಿ ನಾಗಣ್ಣ, ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು, ಜಗದೀಶ್‍ಚಂದ್ರ, ಅಶೋಕ್ ಮೃತ್ಯುಂಜಯ ಸೇರಿದಂತೆ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

ವಶಪಡಿಸಿಕೊಂಡರೆ ಸಾಲದು, ಚಾರ್ಜ್‍ಶೀಟ್ ಹಾಕಬೇಕು

ನಾನು ಕಮಿಷನರ್ ಆಗಿದ್ದಾಗ, ನಗರದಲ್ಲಿ ಡ್ರಗ್ಸ್ ನಿಷೇಧಿಸಲು ಕ್ರಮ ತೆಗೆದುಕೊಳ್ಳಲಾಗಿತ್ತು. ರಾಜ್ಯಾದ್ಯಂತ ಅದು ವಿಸ್ತರಣೆಯಾಯಿತು. ಈಗ ಇರುವ ಕಮಿಷನರ್ ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಂಧಿಸಿ, ಡ್ರಗ್ಸ್ ವಶಪಡಿಸಿಕೊಂಡರೆ ಸಾಲದು. ಅಪರಾಧಿಗಳ ವಿರುದ್ಧ ಚಾರ್ಜ್‍ಶೀಟ್ ಹಾಕಬೇಕು. ಆಗ ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಸಿಬಹುದು. 

-ಭಾಸ್ಕರ್ ರಾವ್, ನಿವೃತ್ತ ಪೊಲೀಸ್ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X