ಎ.23: ಮಂಗಳೂರು ವಿವಿ ಘಟಿಕೋತ್ಸವ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವವು ಎ.23ರಂದು ಪೂ.11ಕ್ಕೆ ಕೊಣಾಜೆಯ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣ ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಯದ ನ್ಯಾಯಧೀಶ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಘಟಿಕೋತ್ಸವ ಭಾಷಣ ಮಾಡು ವರು. ರಾಜ್ಯಪಾಲ ಹಾಗೂ ಮಂಗಳೂರು ವಿವಿ ಕುಲಾಧಿಪತಿ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು.
ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಸಿ.ಎನ್. ಉಪಸ್ಥಿತರಿರುವರು ಎಂದು ಮಂಗಳೂರು ವಿವಿ ಕುಲಸಚಿವರ ಪ್ರಕಟನೆ ತಿಳಿಸಿದೆ.
Next Story





