ಎ. 19-20 ರಂದು ವಿದ್ಯುತ್ ವ್ಯತ್ಯಯ
ಮಂಗಳೂರು : ನಗರದ ಉರ್ವ ಮಾರ್ಕೆಟ್ ಉಪಕೇಂದ್ರದಿಂದ ಹೊರಡುವ ತಿಲಕನಗರ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಯು ನಡೆಯಲಿರುವುದರಿಂದ ಎ.೧೯ರಂದು ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ಬೋಳೂರು, ತಿಲಕನಗರ, ಮಠದಕಣಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
*ನಗರದ ಉರ್ವಮಾರ್ಕೆಟ್ ಉಪಕೇಂದ್ರದಿಂದ ಹೊರಡುವ ಡೊಮಿನಿಕ್ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಎ.೧೯ರಂದು ಬೆಳಗ್ಗೆ ೧೦ರಿಂದ ಸಂಜೆ ೬ರವರೆಗೆ ಕೋಡಿಕಲ್ ಕಟ್ಟೆ, ಕೋಡಿಕಲ್ ಶಾಲೆ, ಕಂಚಿಕಾರಗುತ್ತು, ಆಲಗುಡ್ಡೆ, ಕೊಟ್ಟಾರ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ನಗರದ ಬಿಜೈ ಉಪಕೇಂದ್ರದಿಂದ ಹೊರಡುವ ವಿವೇಕನಗರ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಏ.೨೦ರಂದು ಬೆಳಗ್ಗೆ ೧೦ರಿಂದ ಮಧ್ಯಾಹ್ನ ೨ರವರೆಗೆ ಸಿ.ಜಿ ಕಾಮತ್ ರೋಡ್, ಜೈಲ್‌ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ನಗರದ ಕುಲಶೇಖರ ಉಪಕೇಂದ್ರದಿಂದ ಹೊರಡುವ ಎಕ್ಕೂರು ಫೀಡರ್ ಮತ್ತು ಪಂಪ್‌ವೆಲ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿ ನಡೆಯಲಿರುವುದರಿಂದ ಎ.೨೦ರಂದು ಬೆಳಗ್ಗೆ ೧೦ರಿಂದ ಸಂಜೆ ೫ ರವರೆಗೆ ಉಜ್ಜೋಡಿ, ನೆಕ್ಕರೆಮಾರ್, ಗೋರಿಗುಡ್ಡ, ಎಕ್ಕೂರು, ನೇತ್ರಾವತಿ ಗ್ಯಾರೇಜ್, ಕಡೇಕಾರ್, ಜೆಪ್ಪಿನಮೊಗರು, ತಾರೆದೊಲ್ಯ, ತಂದೊಳಿಗೆ, ಡೆನ್ಮಾರ್ಕ್ ಲೇಔಟ್, ವಾಸುಕೀನಗರ, ಅಳಕೆ ಮಠ, ಕನಕರಬೆಟ್ಟು, ರಾಮ್ತೋಟ, ಕುಡುಪ್ಪಾಡಿ ತೋಟ, ಸದಾಶಿವ ನಗರ, ಪಡೀಲ್‌ಜಂಕ್ಷನ್, ಕಂಕನಾಡಿ ರೈಲ್ವೇ ಸ್ಟೇಷನ್, ನಾಗುರಿ, ಗರೋಡಿ, ಬಲಿತಮಾರ್, ನೇತ್ರಾವತಿ ಲೇಔಟ್, ಪಂಪ್‌ವೆಲ್, ಗ್ಯಾಸ್ ಗೋಡೌನ್, ಸೈಮಾನ್ ಲೇನ್, ಮೇಘನಗರ, ಗುಡ್ಡೆತೋಟ, ರೆಡ್‌ಬಿಲ್ಡಿಂಗ್, ಕೆಂಬಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.







