ಕಾಂಗ್ರೆಸ್ ಜೊತೆ ಹಿತಶತ್ರುಗಳು ಕೈಜೋಡಿಸಿದ್ದಾರೆ: ಸಚಿವ ಡಾ.ಕೆ.ಸುಧಾಕರ್
ಭ್ರಷ್ಟಚಾರ ಆರೋಪ ವಿಚಾರ

ಬೆಂಗಳೂರು, ಎ.18: ಕಾಂಗ್ರೆಸ್ ನಾಯಕರ ಜೊತೆ ಕೆಲ ಹಿತಶತ್ರುಗಳು ಕೈ ಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿ ಇದೆ. ಇವರ ಮುಖವಾಡಗಳನ್ನು ಕಳಚಿ ಬೆತ್ತಲು ಮಾಡುವ ದಿನ ದೂರವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ಹಗರಣಗಳ ಭೂತವನ್ನು ಬೆನ್ನಿಗೆ ಕಟ್ಟಿಕೊಂಡಿರುವ ಕಾಂಗ್ರೆಸ್ ಬಯಲಾಟವನ್ನು ರಾಜ್ಯದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇನ್ನಾದರೂ ರಚನಾತ್ಮಕ ಚಟುವಟಿಕೆಗಳ ಮೂಲಕ ಜನರ ಮುಂದೆ ಹೋಗಲಿ ಎಂದು ಹೇಳಿದ್ದಾರೆ.
ಇತ್ತೀಚೆಗೆ ಸುಳ್ಳುಗಳ ಕಂತೆಯನ್ನೇ ಸತ್ಯ ಎಂದು ಬಿಂಬಿಸುವ ರಾಜಕೀಯ ದೊಂಬರಾಟ ರಾಜ್ಯದಲ್ಲಿ ನಡೆಯುತ್ತಿದೆ. ಆಧಾರ ರಹಿತ, ದಾಖಲೆಗಳೇ ಇಲ್ಲದ ಆರೋಪಗಳ ಮೂಲಕ ಸರಕಾರದ ವರ್ಚಸ್ಸಿಗೆ ಮಸಿ ಬಳಿಯುವ ಮತ್ತು ಸಚಿವರ ತೇಜೋವಧೆ ಮಾಡುವ ಹುನ್ನಾರ ನಡೆದಿದೆ ಎಂದರು.
Next Story





