Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್‍ನಿಂದ ಮಕ್ಕಳ ಕಲಿಕೆಯಲ್ಲಿ ನಷ್ಟ,...

ಕೋವಿಡ್‍ನಿಂದ ಮಕ್ಕಳ ಕಲಿಕೆಯಲ್ಲಿ ನಷ್ಟ, ಸರಕಾರ ಶಿಕ್ಷಣದ ಕಡೆಗೆ ಗಮನಹರಿಸಲಿ: ಆ್ಯಕ್ಷನ್ ಏಯ್ಡ್ ಅಸೋಸಿಯೇಶನ್

ವಾರ್ತಾಭಾರತಿವಾರ್ತಾಭಾರತಿ19 April 2022 6:42 PM IST
share
ಕೋವಿಡ್‍ನಿಂದ ಮಕ್ಕಳ ಕಲಿಕೆಯಲ್ಲಿ ನಷ್ಟ, ಸರಕಾರ ಶಿಕ್ಷಣದ ಕಡೆಗೆ ಗಮನಹರಿಸಲಿ: ಆ್ಯಕ್ಷನ್ ಏಯ್ಡ್ ಅಸೋಸಿಯೇಶನ್

ಬೆಂಗಳೂರು, ಎ.19: ಮಕಳೆದ ಎರಡು ವರ್ಷಗಳಿಂದ ಕೋವಿಡ್ ಜೀವನ ಅವಶ್ಯಕತೆಯ ಮೇಲೆ ಭಯಾನಾಕ ಪರಿಣಾಮ ಬೀರಿದೆ. ಶೋಷಣೆಗೊಳಪಟ್ಟ ಕುಟುಂಬಗಳು ಪ್ರೀತಿಪಾತ್ರರನ್ನು ಹಾಗೂ ಜೀವನೋಪಾಯವನ್ನು ಕಳೆದುಕೊಂಡಿರುವುದು ಒಂದೆಡೆಯಾದರೆ, ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಕ್ಕಳಿಗೆ ಕಲಿಕೆಯಲ್ಲಿ ನಷ್ಟವಾಗಿದೆ ಎಂದು ಅಧ್ಯಯನದಿಂದ ಬಹಿರಂಗವಾಗಿದೆ. ಹಾಗಾಗಿ ರಾಜ್ಯ ಸರಕಾರವು ಮಕ್ಕಳ ಶಿಕ್ಷಣದ ಕಡೆಗೆ ಗಮನಹರಿಸಬೇಕು ಎಂದು ಆಕ್ಷನ್ ಏಯ್ಡ್ ಅಸೋಸಿಯೇಶನ್ ತಿಳಿಸಿದೆ. 

ಮಂಗಳವಾರ ಅಸೋಸಿಯೇಶನ್‍ನ ಮುಖ್ಯಸ್ಥೆ ನಂದಿನಿ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿ, ಮಕ್ಕಳ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಖಾತರಿಪಡಿಸಿಕೊಳ್ಳಲಾಗದೆ ಬಹಳ ಸಂಕಟದಲ್ಲಿದ್ದಾರೆ. ಪೋಷಕರು ಮಕ್ಕಳ ಶೈಕ್ಷಣಿಕ ಶುಲ್ಕವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ. ಬಾಲ ದುಡಿಮೆ ಹಾಗೂ ಬಾಲ್ಯ ವಿವಾಹ ಹೀಗೆ ನಾನಾ ಕಾರಣಕ್ಕಾಗಿ ಮಕ್ಕಳು ಶಾಲೆಗೆ ಸೇರುತ್ತಿಲ್ಲ. ದಲಿತ ಮಕ್ಕಳಿಗೆ ವಿದ್ಯಾರ್ಥಿವೇತನ ಇನ್ನೂ ಸಿಗುತ್ತಿಲ್ಲ. ಶುಲ್ಕ ಮರುಪಾವತಿಯಾಗುತ್ತಿಲ್ಲ ಎಂದು ಅಧ್ಯಯನದಿಂದ ತಿಳಿದು ಬಂದಿದೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಬೆಳಗಾವಿ, ಬಾಗಲಕೋಟೆ, ಕೊಡಗು ಜಿಲ್ಲೆಯ ಮಕ್ಕಳು ಶಾಲೆಯಿಂದ ಹೊರಗಡೆ ಉಳಿದು, ಇಟ್ಟಂಗಿ ಭಟ್ಟಿಗಳಲ್ಲಿ, ಕಾಫಿ ತೋಟಗಳಲ್ಲಿ, ಹಾಗೂ ಇತರೆ ವಲಯಗಳಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ದಲಿತ ಮತ್ತು ಮುಸ್ಲಿಂ ಸಮುದಾಯದ ಮಕ್ಕಳು ಹಾನಿಗೊಳಪಟ್ಟು ಬಹಳಷ್ಟು ಕಷ್ಟಕರ ಸ್ಥಿತಿಯಲ್ಲಿದ್ದು, ತಾರತಮ್ಯಕ್ಕೊಳಪಡುತ್ತಿದ್ದಾರೆ. ತಂದೆ ಅಥವಾ ತಾಯಿ, ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳು, ಬಹಳಷ್ಟು ಪ್ರಮಾಣದಲ್ಲಿ ಶಾಲೆಯನ್ನು ಬಿಟ್ಟು ಹೊರಗಡೆ ಉಳಿದಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕೆಲವು ಮಕ್ಕಳು ಕಳ್ಳಸಾಗಾಣಿಕೆಗೆ ಒಳಗಾಗುತ್ತಿದ್ದಾರೆ, ಇನ್ನೂ ಕೆಲವು ಮಕ್ಕಳು ಬಾಲ್ಯ ವಿವಾಹವಾಗಿದ್ದಾರೆ. ಕರ್ನಾಟಕ ರಾಜ್ಯ ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದಲ್ಲಿ ಈ ಎಲ್ಲಾ ಕಾರಣಕ್ಕಾಗಿ ಬಹಳ ಕೆಳಸ್ಥರದಲ್ಲಿದೆ ಎಂದು ಅಂಕಿ-ಅಂಶಗಳೇ ಹೇಳುತ್ತಿದ್ದು, ಮುಸ್ಲಿಂ ಹೆಣ್ಣು ಮಕ್ಕಳು ಶಿಕ್ಷಣ ಪಡೆಯದೇ ಇರುವಂತೆ ತಡೆಯಲಾಗುತ್ತಿದೆ. ಸಂಪ್ರದಾಯ, ಉಡುಪುಗಳ ಹೆಸರಲ್ಲಿ ಶಿಕ್ಷಣದಿಂದ ಹೊರಗಿಡುವ ಮೂಲಕ ಶಿಕ್ಷಣದಲ್ಲಿ ಅಸಮಾನತೆಯನ್ನು ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸ್ಲಂ ಮಹಿಳಾ ಸಂಘಟನೆಯ ಮುಖ್ಯಸ್ಥೆ ಜಾನ್ಸಿ ಮಾತನಾಡಿ, ಕೋವಿಡ್ 3ನೇ ಅಲೆಯ ನಂತರ ಶಾಲೆಗಳು ತೆರೆದುಕೊಂಡಿದೆ. ಆದರೆ ಖಾಸಗೀ ಶಾಲೆಗಳಲ್ಲಿನ ಆಡಳಿತ ಮಕ್ಕಳ ಶಾಲಾ ಶುಲ್ಕ ಪಾವತಿಸದೆ ಮಕ್ಕಳನ್ನು  ಶಾಲೆಗೆ ಸೇರಿಸಿಕೊಳ್ಳುವದಕ್ಕೂ ತಡೆಯೊಡ್ಡಿರುವರು, ಪರೀಕ್ಷೆ ಬರೆಯಲು ಬಿಡುವುದಿಲ್ಲ, ಮಕ್ಕಳ ಫಲಿತಾಂಶವನ್ನು ಕೊಡಲು ನಿರಾಕರಿಸಿದೆ. ಮಕ್ಕಳ ಶೈಕ್ಷಣಿಕ ವರ್ಗಾವಣೆ ಪತ್ರವನ್ನು ಖಾಸಗೀ ಶಾಲೆಗಳಿಂದ ಪಡೆಯಲು ಪೋಷಕರು ಹರಸಾಹಸ ಮಾಡಬೇಕಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಸರಕಾರ ವಿದ್ಯಾಗಮ ಕಾರ್ಯಕ್ರಮ ಜಾರಿಗೊಳಿಸಿದ್ದರೂ, ಅದರಿಂದ ಅಷ್ಟು ಕಲಿಕೆಗಳು ಸಾಧ್ಯವಾಗಲಿಲ್ಲ. ಪೂರಕ ಕಲಿಕಾ ಪರಿಕರ ಇಲ್ಲದೆಯೇ ವಿದ್ಯಾಗಮ ನಡೆಯುತ್ತಿದೆ. ಹಳ್ಳಿಗಳಲ್ಲಿ ಶಾಲೆ ಬಿಟ್ಟಿರುವ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯಾಗಲಿ ಮತ್ತು ಸಮಾಜ ಕಲ್ಯಾಣ ಇಲಾಖೆಯಾಗಲಿ ಕಾರ್ಯಗತಗೊಳಿಸಿಲ್ಲ. 

- ಕವಿತಾ ರತ್ನ, ಕನ್ಸರ್ನಡ್ ಫಾರ್ ವರ್ಕಿಂಗ್ ಚಿಲ್ಡರನ್‍ನ ಮುಖ್ಯಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X