ಸರಕಾರಿ ನೌಕರರ ದಿನಾಚರಣೆ, ಸರ್ವೋತ್ತಮ ಪ್ರಶಸ್ತಿ ಪ್ರದಾನ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹಾಗೂ ೨೦೨೧-೨೨ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ ಎ.೨೧ರಂದು ಬೆಳಗ್ಗೆ ೧೦:೦೦ ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ.ಸುನಿಲ್ ಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story