ಶ್ರೀ ಉಲ್ಕಾ ಮೀನು ಕಾರ್ಖಾನೆ ದುರಂತ; ಸೂಪರ್ ವೈಸರ್ ಸೆರೆ
ಬಂಧಿತರ ಸಂಖ್ಯೆ 5ಕ್ಕೇರಿಕೆ

ಮಂಗಳೂರು : ಮಂಗಳೂರು ವಿಶೇಷ ಆರ್ಥಿಕ ವಲಯ ಮೀನು ಸಂಸ್ಕರಣಾ ಕಾರ್ಖಾನೆಯ ಸೂಪರ್ ವೈಸರ್ ಆಗಿದ್ದ ಮುಂಬೈ ಮೂಲದ ಬಾಲು ಎಂಬಾತನನ್ನು ಪೊಲೀಸರು ಬಂಧಿಸಿದ್ದು ಇದರೊಂದಿಗೆ ಬಂಧಿತರ ಸಂಖ್ಯೆ 5ಕ್ಕೇರಿದೆ.
ಕಂಪೆನಿಯ ಮಾಲಕ ರಾಜು ಗೋರಕ್ ಎಂಬಾತ ಪ್ರಕರಣದ ಒಂದನೇ ಆರೋಪಿಯಾಗಿದ್ದು, ಈತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಸೂಪರ್ ವೈಸರ್ ಮೊಹಮ್ಮದ್ ಅನ್ವರ್ ಮತ್ತು ಕಾರ್ಮಿಕರ ಆಗು ಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಫಾರೂಕ್ ಉಳ್ಳಾಲ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Next Story