ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಮಂಗಳೂರು : ನೇತ್ರಾವತಿ ನದಿ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 40 ವರ್ಷ ಪ್ರಾಯದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ.
ಮೃತ ದೇಹದ ಗುರುತು ಪತ್ತೆಯಾಗಿಲ್ಲ. ವಾಹನ ಸವಾರರೊಬ್ಬರು ನದಿ ತಟದಲ್ಲಿದ್ದ ಮೃತದೇಹವನ್ನು ಗಮನಿಸಿ, ಕಂಕನಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮೃತ ದೇಹವನ್ನು ನೋಡಲು ರಸ್ತೆಯಲ್ಲಿ ಸವಾರರು ವಾಹನ ನಿಲ್ಲಿಸಿದ ಪರಿಣಾಮ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಬಳಿಕ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ ವಾಹನ ಸವಾರರನ್ನು ಚದುರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಅಗ್ನಿಶಾಮಕ ದಳ ಸಹಾಯದಿಂದ ಮೃತ ದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಯಿತು.
Next Story