Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆ.ಸಿ.ಜನರಲ್ ನಲ್ಲೂ ತಾಯಿ-ಶಿಶು...

ಕೆ.ಸಿ.ಜನರಲ್ ನಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು : ಸಚಿವ ಡಾ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ20 April 2022 3:31 PM IST
share
ಕೆ.ಸಿ.ಜನರಲ್ ನಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು : ಸಚಿವ ಡಾ. ಸುಧಾಕರ್

ಬೆಂಗಳೂರು: ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ವಾಣಿ ವಿಲಾಸ ಮಾದರಿಯಲ್ಲಿ ನಿರ್ಮಿಸಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದಂತೆ, ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಕನಿಷ್ಠ 500 ಹಾಸಿಗೆ ಸಾಮರ್ಥ್ಯ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲಾ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು.

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್ ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ. ಇದು ಶ್ಲಾಘನೀಯವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಬಚಾವೊ, ಬೇಟಿ ಪಡಾವೊ ಎಂದು ಘೋಷಿಸಿ ಹೆಣ್ಣುಮಕ್ಕಳ ರಕ್ಷಣೆಗೆ ಒತ್ತು ನೀಡಿದ್ದಾರೆ. ಇದೇ ರೀತಿ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುವುದನ್ನು ತಡೆಯಲು ಕಠಿಣ ಕಾನೂನು ಜಾರಿಯಲ್ಲಿದೆ. ಹೊಸ ಎನ್‍ಟಿಪಿ ಕಾನೂನಿನಲ್ಲಿ, ಆಪತ್ತು ಇರುವ ತಾಯಂದಿರು ಹಾಗೂ ಆರೋಗ್ಯಕರವಾಗಿ ಬೆಳೆಯದ ಭ್ರೂಣಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಗರ್ಭಪಾತ ಮಾಡಲು ಅವಕಾಶವಿದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ದೇಶದಲ್ಲಿ ಒಂದೂವರೆ ಲಕ್ಷದಷ್ಟು ಮಕ್ಕಳು 5 ವರ್ಷದೊಳಗೆ ನ್ಯುಮೋನಿಯಾಗೆ ತುತ್ತಾಗುತ್ತಿದ್ದಾರೆ. ರಾಜ್ಯದಲ್ಲಿ 1,000 ಶಿಶು ಜನನದಲ್ಲಿ 28 ಸಾವುಗಳು ನ್ಯುಮೋನಿಯಾದಿಂದ ಸಂಭವಿಸುತ್ತಿವೆ. ಇದನ್ನು ನಾಲ್ಕು, ಐದಕ್ಕೆ ಇಳಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಗುರಿ ನೀಡಿದೆ. ಇದಕ್ಕಾಗಿ ಹೆಚ್ಚು ಅರಿವು ತರುವ ಕಾರ್ಯಕ್ರಮ ನಡೆಯಬೇಕಿದೆ. ಮುನ್ನೆಚ್ಚರಿಕೆಯಿಂದಲೇ ಅನೇಕ ರೋಗಗಳನ್ನು ತಡೆಗಟ್ಟಲು ಸಾಧ್ಯವಿದೆ. ಮಕ್ಕಳ ಆರೋಗ್ಯ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದರು.

ಕೆ.ಸಿ.ಜನರಲ್ ಗೆ ಉತ್ತಮ ಬದಲಾವಣೆ ಬೇಕಿದೆ

ಕೆ.ಸಿ.ಜನರಲ್ ಆಸ್ಪತ್ರೆ ನಗರದ ಹೃದಯಭಾಗದಲ್ಲಿದ್ದು, ಉತ್ತಮ ಆಸ್ಪತ್ರೆಯಾಗಿದೆ. ಇಲ್ಲಿಗೆ ಬರುವ ರೋಗಿಗಳನ್ನು ಮನೆಯವರಂತೆ ಆರೈಕೆ ಮಾಡುವ ಅಗತ್ಯವಿದೆ. ಆದರೆ ಅಂತಹ ನಿರೀಕ್ಷಿತ ಬದಲಾವಣೆ ಈ ಆಸ್ಪತ್ರೆಯಲ್ಲಿ ಕಂಡುಬಂದಿಲ್ಲ. ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲ ಎಂದು ಚಿಂತಿಸಬೇಕಿದೆ. ಆಸ್ಪತ್ರೆಯ ಎಲ್ಲರೂ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ಆಸ್ಪತ್ರೆಯ ಸಂಪೂರ್ಣ ವ್ಯವಸ್ಥೆಯನ್ನು ನಿರ್ವಹಣೆ ಮಾಡುವವರು ಉತ್ತಮವಾಗಿ ಕೆಲಸ ಮಾಡಬೇಕು. ಒಳ್ಳೆಯ ಸೇವೆ ನೀಡಿದರೆ ಜನರಿಗೆ ಒಳ್ಳೆಯದಾಗುತ್ತದೆ. ಇದರಿಂದ ಸರ್ಕಾರಕ್ಕೂ ಹೆಸರು ಬರುತ್ತದೆ ಎಂದು ಕಿವಿಮಾತು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X