Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹುಬ್ಬಳ್ಳಿ ಗಲಭೆ; ಯಡಿಯೂರಪ್ಪ,...

ಹುಬ್ಬಳ್ಳಿ ಗಲಭೆ; ಯಡಿಯೂರಪ್ಪ, ಸಚಿವರು-ಸಂಸದರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ20 April 2022 3:50 PM IST
share
ಹುಬ್ಬಳ್ಳಿ ಗಲಭೆ; ಯಡಿಯೂರಪ್ಪ, ಸಚಿವರು-ಸಂಸದರು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ‘ಹುಬ್ಬಳ್ಳಿ ಗಲಭೆ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರದ ಸಚಿವರು ಹಾಗೂ ಸಂಸದರು ಕಾಂಗ್ರೆಸ್ ಪಕ್ಷದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಭಾಗಿಯಾಗಿದ್ದರೆ, ಅವರನ್ನು ಬಂಧಿಸಲಿ. ಈವರೆಗೂ ಯಾಕೆ ಬಂಧಿಸಿಲ್ಲ ? ನಮ್ಮ ಜಿಲ್ಲಾಧ್ಯಕ್ಷರು ಆ ಸ್ಥಳದಲ್ಲಿದ್ದರು ಎಂದು ಹೇಳುತ್ತಾರೆ. ಪೊಲೀಸರೇ ಪರಿಸ್ಥಿತಿ ನಿಯಂತ್ರಿಸಲು ಶಾಂತಿ ಕಾಪಾಡಲು ನಮ್ಮ ಜಿಲ್ಲಾಧ್ಯಕ್ಷರನ್ನು ಅಲ್ಲಿಗೆ ಆಹ್ವಾನಿಸಿದ್ದರು. ಪೊಲೀಸರ ಆಹ್ವಾನದ ಮೇರೆಗೆ ನಮ್ಮ ಜಿಲ್ಲಾಧ್ಯಕ್ಷರು ಪೊಲೀಸ್ ಜೀಪ್ ಹತ್ತಿ ಮೈಕ್ ನಲ್ಲಿ ಎಲ್ಲರೂ ಶಾಂತವಾಗಿರುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರು ಕೇವಲ ಕಾಂಗ್ರೆಸ್ ಮೇಲೆ ಆರೋಪ ಮಾಡಿ ಪಲಾಯನ ಮಾಡುತ್ತಿರುವುದೇಕೆ? ಅವರ ವಿರುದ್ಧ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ ಎಂದು ಡಿಕೆ ಶಿವಕುಮಾರ್‌ ಪ್ರಶ್ನಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದು, ಹುಬ್ಬಳ್ಳಿ ಪರಿಸ್ಥಿತಿ ಶಾಂತವಾಗಿದೆ. ಕೇವಲ ರಾಜಕೀಯ ಹಿತಾಸಕ್ತಿ ಕಾಪಾಡಿಕೊಳ್ಳಲು ಹುಬ್ಬಳ್ಳಿಗೆ ಬಿಜೆಪಿ ಬೆಂಕಿ ಹಚ್ಚುತ್ತಿದೆ. ಬಿಜೆಪಿ ತಮ್ಮ ರಾಜಕೀಯಕ್ಕೆ ರಾಜ್ಯವನ್ನೇ ಸುಡುತ್ತಿದ್ದಾರೆ, ಕೊಲ್ಲುತ್ತಿದ್ದಾರೆ.

ಇನ್ನು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುವ ಮುನ್ನವೇ, ಮುಖ್ಯಮಂತ್ರಿಗಳು, ಬಿಜೆಪಿ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಅವರು ಕ್ಲೀನ್ ಚಿಟ್ ಕೊಟ್ಟ ನಂತರ ಯಾವ ಪೊಲೀಸ್ ಅಧಿಕಾರಿಗಳು ತಾನೇ ಪ್ರಾಮಾಣಿಕವಾಗಿ ತನಿಖೆ ಮಾಡುತ್ತಾರೆ. ಸರ್ಕಾರ ಆರೋಪಿಯನ್ನು ರಕ್ಷಿಸುತ್ತಿದೆ. ಈಶ್ವರಪ್ಪನವರ ವಿರುದ್ಧ ದೂರು ದಾಖಲಾಗಿರುವ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕು. ಸಂತೋಷ್ ಅವರು ಕೇಂದ್ರ ಸಚಿವರು, ಪ್ರಧಾನಿ, ಮುಖ್ಯಮಂತ್ರಿಗಳು ಹಾಗೂ ಯಡಿಯೂರಪ್ಪನವರಿಗೆ ಪತ್ರ ಬರೆದು ತಮ್ಮನ್ನು ರಕ್ಷಿಸುವಂತೆ ಮನವಿ ಮಾಡಿದ್ದರು. ಅವರು ದೆಹಲಿಯಲ್ಲಿ ಸುದ್ದಿವಾಹಿನಿಗಳಿಗೆ ಸಂದರ್ಶನವನ್ನು ಕೊಟ್ಟಿದ್ದರು. ಅದರಲ್ಲಿ ಅನೇಕ ವಿಚಾರಗಳು ಬಂದಿದ್ದವು. ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವ ಬದಲು, ಆತನ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಈ 40 % ಕಮಿಷನ್ ಕೇವಲ ಈ ಒಬ್ಬ ಗುತ್ತಿಗೆದಾರನ ಆರೋಪವಲ್ಲ, ರಾಜ್ಯದ 2 ಲಕ್ಷ ಗುತ್ತಿಗೆದಾರರು ಇರುವ ಸರ್ಕಾರಿ ನೋಂದಣಿಯಾಗಿರುವ ಸಂಘದ ಆರೋಪ. ಮೇವು ಪೂರೈಕೆ, ಬಿಬಿಎಂಪಿ ಕಸ, ಮಠಾಧೀಶರ ಅನುದಾನ ಎಲ್ಲ ವಿಚಾರದಲ್ಲೂ 40 % ಕಮಿಷನ್ ಕೇಳಿ ಬರುತ್ತಿದೆ. ಇದು ರಾಜ್ಯದ ಪ್ರತಿ ಹಳ್ಳಿಗೂ ಹಬ್ಬಿದ್ದು, ಈ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದೆ. ಹೀಗಾಗಿ ರಾಜಧಾನಿಯನ್ನು ರಕ್ಷಿಸಬೇಕಿದೆ.

ಈ ನಗರವನ್ನು ನಾವು ಕಟ್ಟಿ ಬೆಳೆಸಿಲ್ಲ. ಜನರ ಶ್ರಮ , ಹಳೆಯ ನಾಯಕರ ದಕ್ಷತೆಯ ಆಡಳಿತದಿಂದ ಕಟ್ಟಲಾಗಿದೆ. ರಾಜ್ಯದ ಪ್ರತಿಭಾವಂತ ಯುವಕರು ಬೇರೆ ರಾಷ್ಟ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಅವರೆಲ್ಲರೂ ನಮ್ಮ ರಾಜ್ಯದಲ್ಲಿ ಏನಾಗುತ್ತಿದೆ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಬೊಮ್ಮಾಯಿ ಅವರು ನೈತಿಕ ಪೊಲೀಸ್ ಗಿರಿಗೆ ಯಾಕೆ ಬೆಂಬಲ ನೀಡುತ್ತಿದ್ದಾರೆ, ತನಿಖೆ ಆರಂಭಕ್ಕೂ ಮುನ್ನವೇ ಕ್ಲೀನ್ ಚಿಟ್ ಯಾಕೆ ನೀಡುತ್ತಿದ್ದಾರೆ? ತಿಳಿಯುತ್ತಿಲ್ಲ.’ 

ಇನ್ನು ಹುಬ್ಬಳ್ಳಿ ಘಟನೆಯಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂಬ ಆರ್. ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಕಡೆ ಒಂದು ಮಾತಿದೆ. ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಎಂದು. ಏನೇ ಆದರೂ ಬಿಜೆಪಿಯವರು ಕಾಂಗ್ರೆಸ್ ಮೇಲೆ ಹಾಕುತ್ತಾರೆ. ಪೊಲೀಸ್ ನವರ ಮನವಿ ಮೇರೆಗೆ ನಮ್ಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ತಾಫ್ ಅವರು ಸ್ಥಳಕ್ಕೆ ಹೋಗಿದ್ದರು. ಇಲ್ಲದಿದ್ದರೆ ಪೊಲೀಸ್ ಜೀಪ್ ಮೇಲೆ ನಿಂತು ಮೈಕ್ ಹಿಡಿದು ಮಾತನಾಡಲು ಸಾಧ್ಯವೇ? ಅವರಿಗೂ ಕಲ್ಲೇಟು ಬಿದ್ದಿದ್ದು, ಕೈಗೆ ಗಾಯವಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅವರು ಪ್ರತಿ ಬಾರಿ ಇದನ್ನೇ ಹೇಳುತ್ತಾರೆ. ಕಾಂಗ್ರೆಸ್ ನವರು ಈ ಗಲಭೆ ಮಾಡಿದ್ದರೆ ಅವರನ್ನು ಬಂಧಿಸಲಿ. ನಿನ್ನೆ ನಾನೇ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮಾತನಾಡಿ, ವಾಸ್ತವಾಂಶವನ್ನು ತಿಳಿದಿದ್ದೇನೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ ಗಿರಿ ಮಾಡುವವರ ರಕ್ಷಣೆಗೆ ನಾವು ಹೋಗುವುದಿಲ್ಲ. ಅದೇ ಸರ್ಕಾರದ  ಮಂತ್ರಿಗಳು, ಮುಖ್ಯಮಂತ್ರಿಗಳು ಆರಂಭದಿಂದಲೂ ನೈತಿಕ ಪೊಲೀಸ್ ಗಿರಿ ಮೊಟಕು ಮಾಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಅಶೋಕ್, ಯಡಿಯೂರಪ್ಪನವರು ಮಾತನಾಡುತ್ತಾರೆ ಎಂದು ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಈ ರಾಜ್ಯದಲ್ಲಿ ಕಾನೂನು ಇದ್ದು, ಅದರಂತೆ ನಡೆದುಕೊಳ್ಳಲಿ. ಇವರು ಕಾನೂನು ಎಲ್ಲಿ ಸಮನಾಗಿ ಪಾಲನೆ ಮಾಡಿದ್ದಾರೆ? ನಮ್ಮ ಮೇಲೆ ಪ್ರಕರಣ ದಾಖಲಿಸಿ, ಈಶ್ವರಪ್ಪನವರ ಜತೆ ಮೆರವಣಿಗೆ ಹೋದವರ ಮೇಲೆ ಕೇಸ್ ದಾಖಲಿಸಿಲ್ಲ. ಶಿವಮೊಗ್ಗದಲ್ಲಿ ಸೆಕ್ಷನ್ 144 ಉಲ್ಲಂಘಿಸಿದಾಗ ಅವರ ಮೇಲೆ ಏಕೆ ಪ್ರಕರಣ ದಾಖಲಿಸಲಿಲ್ಲ? ನಮ್ಮ ಮೇಲೆ ಕೇಸ್ ಹಾಕಿ ಕೋರ್ಟ್ ಅಲೆಸಿ, ಜೈಲಿಗೆ ಹಾಕಲು ಪ್ರಯತ್ನಿಸುತ್ತಿದ್ದಾರೆ. ಅವರು ಏನು ಮಾಡುತ್ತಾರೋ ಮಾಡಲಿ, ನೋಡೋಣ’ ಎಂದರು.

ದಿಂಗಾಲೇಶ್ವರ ಸ್ವಾಮೀಜಿಗಳು ಮಾಡಿರುವ ಕಮಿಷನ್ ಆರೋಪದ ಹಿಂದೆ ಕಾಂಗ್ರೆಸ್ ಇದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಪ್ರಸ್ತಾಪಿದಾಗ, ‘ಮೊದಲು ಬಿಜೆಪಿಯವರು ತಮ್ಮ ಮೇಲಿರುವ ಆರೋಪದಿಂದ ಹೊರಬರಲಿ. ಸ್ವಾಮೀಜಿ ಅವರು ಬಹಳ ವಿಚಾರವಂತರು, ಪ್ರಜ್ಞಾವಂತರಿದ್ದಾರೆ. ಅಂತಹವರು ಈ ಆರೋಪ ಮಾಡಿದ್ದಾರೆ. ಅವರಿಗಾಗಿರುವ ನೋವು, ಅನುಭವ ಹೇಳಿಕೊಂಡಿದ್ದಾರೆ. ನನ್ನ ಬಳಿಯೂ ಅನೇಕ ಸ್ವಾಮೀಜಿಗಳು ಈ ಬಗ್ಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರದ 40 % ಕಮಿಷನ್ ವಿಚಾರ ಈಗ ಜಗಜ್ಜಾಹೀರವಾಗಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಾಗಲೇ ಸರ್ಕಾರ ಎಚ್ಛೆತ್ತು ಕೊಂಡಿದ್ದರೆ, ಅವರ ಹಾಗೂ ರಾಜ್ಯದ ಮರ್ಯಾದೆ ಉಳಿಯುತ್ತಿತ್ತು. ಈಗ ಎಲ್ಲರ ಮರ್ಯಾದೆ ಬೀದಿಪಾಲಾಗಿದೆ. 

ದಿಂಗಾಲೇಶ್ವರ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ, ಅವರು ಸಿಎಂ ಆಗಲಿ ಎಂದು ಆಶೀರ್ವಾದ ಮಾಡಿದ್ದು, ಅವರ ಕುಮ್ಮಕ್ಕಿನಿಂದಲೇ ಇಂತಹ ಹೇಳಿಕೆ ನೀಡುತ್ತಿದ್ದಾರೆಯೇ ರಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಮನೆಗೆ ಬಂದವರೆಲ್ಲಾ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡುತ್ತಾರೆ. ಈಶ್ವರಪ್ಪನವರಿಗೆ ಒಳ್ಳೆಯದಾಗಲಿ ಎಂದು ಧೈರ್ಯ ತುಂಬಲು ಸ್ವಾಮೀಜಿಗಳು ಅವರ ಮನೆಗೂ ಭೇಟಿ ನೀಡಿದ್ದರು. ಹಾಗೆಂದು ಅವರನ್ನು ಸಿಎಂ ಮಾಡಲು ಹೋಗಿದ್ದರು ಎಂದು ಹೇಳಲು ಸಾಧ್ಯವೇ? ಸುಮ್ಮನೇ ನಿಮ್ಮಷ್ಟಕ್ಕೇ ನೀವೇ ಹೊಸ ವಿಚಾರ ಸೃಷ್ಟಿಸುತ್ತೀರಿ’ ಎಂದರು.

ದೆಹಲಿ, ಉತ್ತರ ಪ್ರದೇಶ ರೀತಿಯಲ್ಲೇ ಬುಲ್ಡೋಜರ್ ಮಾದರಿ ಬೇಕು ಎಂದು ಯತ್ನಾಳ್ ಹಾಗೂ ಸಿ.ಟಿ ರವಿ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇವೆ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಅನೇಕ ವರ್ಷಗಳಿಂದ ವಸತಿ ಇಲ್ಲದ ನಿರಾಶ್ರಿತರು ಸರ್ಕಾರಿ ಜಾಗದಲ್ಲಿ ವಾಸುತ್ತಿದ್ದಾರೆ. ಆದರೆ ಅವರನ್ನು ತೆರವುಗೊಳಿಸಲು ಯಾವ ರೀತಿ ಪರ್ಯಾಯ ವ್ಯವಸ್ಥೆ ಮಾಡಬೇಕು, ಹೇಗೆ ಕ್ರಮ ಕೈಗೊಳ್ಳಬೇಕು ಎಂದು ಕಾನೂನಿದೆ. ಆದರೆ ರಾಜಕೀಯ ಉದ್ದೇಶಕ್ಕೆ, ದ್ವೇಷದಿಂದ ಅವರ ಮನೆಗಳನ್ನು ಬುಲ್ಡೋಜರ್ ಗಳ ಮೂಲಕ ಕೆಡವಿ ಕೆಟ್ಟ ಸಂದೇಶ ರವಾನಿಸಲಾಗುತ್ತಿದೆ. ದೇಶದಲ್ಲಿ ಜನ ಭಯದಿಂದ ಬದುಕುವಂತೆ ಮಾಡಲಾಗುತ್ತಿದೆ. ದೇಶದಲ್ಲಿ ಹಬ್ಬಲಾಗುತ್ತಿರುವ ಕೋಮುದ್ವೇಷ ಖಂಡನೀಯ. ನಾವು ಎಲ್ಲರ ಭಾವನೆಗಳನ್ನು ಗೌರವಿಸಬೇಕು ಎಂದು ನಮ್ಮ ರಾಷ್ಟ್ರೀಯ ನಾಯಕರು ತಿಳಿಸಿದ್ದಾರೆ. ಈ ವಿಚಾರದಲ್ಲಿ ನ್ಯಾಯಾಲಯದ ಸೂಚನೆಗಳನ್ನು ಪಾಲಿಸಬೇಕು. ಇನ್ನು ಬೀದಿ ವ್ಯಾಪಾರಿಗಳಿಗೂ ಅವಕಾಶ ನೀಡಬೇಕು ಎಂದು ತೀರ್ಪುಗಳಿವೆ. ಅದರಂತೆ ನಡೆದುಕೊಳ್ಳಬೇಕು’ ಎಂದರು.

2023 ರ ಚುನಾವಣೆಯಲ್ಲಿ 50 ಸ್ವಾಮೀಜಿಗಳು ಸ್ಪರ್ಧೆ ಮಾಡುವ ವಿಚಾರವಾಗಿ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ವಿವಿಧ ಮಠಗಳ ಸ್ವಾಮೀಜಿಗಳ ಧ್ವನಿ ಹೊರಬರುತ್ತಿವೆ. ಈ ಹಿಂದೆ ಅವರನ್ನು ರಾಜಕೀಯಕ್ಕೆ ಬಳಿಸಿಕೊಂಡು ಈಗ ಅವರಿಗೆ ಬಿಜೆಪಿ ಸರ್ಕಾರ ನೋವುಂಟು ಮಾಡಿದೆ. ಅವರಿಗೆ ನೀಡುವ ಅನುದಾನದಲ್ಲಿ 30% ಕಮಿಷನ್ ಕೇಳಲಾಗುತ್ತಿದೆ. ಹೀಗಾಗಿ ಮಠಾಧೀಶರುಗಳು ನೋವಿನಿಂದ ಈ ರೀತಿ ಧ್ವನಿ ಎತ್ತುತ್ತಿದ್ದಾರೆ. ಇವೆಲ್ಲಕ್ಕೂ ಬಿಜೆಪಿ ನಾಯಕರು ಉತ್ತರಿಸಬೇಕು’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X