ಹುಣಸೂರು | ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಆರು ಮಂದಿ ಮೃತ್ಯು

ಹುಣಸೂರು: ತಾಲೂಕಿನ ಕಲ್‌ಬೆಟ್ಟದ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಒಂದೇ ಕುಟುಂಬದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ ಹಾಗೂ ಬಾಬು ಮೃತಪಟ್ಟವರು.
ಬುಧವಾರ ಹುಣಸೂರಿನಲ್ಲಿ ಸಂಬಂಧಿಕರ ಮನೆಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾಲಿಬೆಟ್ಟ ಕಡೆಗೆ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಘಟನೆಯಿಂದ ಕಾರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಹುಣಸೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಪಾರ್ಥೀವ ಶರೀರವನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

Next Story





