ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ ಅರ್ಚಕನಿಗೆ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಂಗಳೂರು, ಎ.20: ಬಾಲಕಿಯರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ ಅರ್ಚಕನಿಗೆ ಎಫ್‍ಟಿಎಸ್‍ಸಿ 1ನೆ ಕೋರ್ಟ್ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
ಚಂದ್ರಾ ಲೇಔಟ್ ನಿವಾಸಿ ಸುಧೀಂದ್ರ ಅಪರಾಧಿ. ಕೆಲ ವರ್ಷಗಳ ಹಿಂದೆ ಸುಧೀಂದ್ರ ಆತನ ಮನೆ ಸಮೀಪದಲ್ಲಿ ಬಾಲಕಿಯರ ಜತೆಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ್ದ.
ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸುಧೀಂದ್ರನ ವಿರುದ್ಧ ಎಫ್‍ಟಿಎಸ್‍ಸಿ 1ನೆ ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ ಸಾಕ್ಷಾಧಾರಗಳನ್ನು ಪರಿಗಣಿಸಿ ಸುಧೀಂದ್ರನನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ. ಜತೆಗೆ ನೊಂದ ಬಾಲಕಿಯರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
Next Story





