Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಕ್ಕಚ್ಚೇರಿ ಝುಬೈರ್ ಕೊಲೆ ಪ್ರಕರಣ:...

ಮುಕ್ಕಚ್ಚೇರಿ ಝುಬೈರ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ20 April 2022 9:08 PM IST
share
ಮುಕ್ಕಚ್ಚೇರಿ ಝುಬೈರ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಮುಕ್ಕಚ್ಚೇರಿ ಮಸೀದಿ ಎದುರು 2017ರ ಅ.4ರಂದು ನಡೆದಿದ್ದ ಮುಕ್ಕಚ್ಚೇರಿಯ ಝುಬೈರ್ ಎಂಬವರ ಕೊಲೆ ಪ್ರಕರಣದ ಮೂವರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ನಿಝಾಮುದ್ದೀನ್, ತಾಜುದ್ದೀನ್ ಮತ್ತು ಮುಸ್ತಾಫ್ ಶಿಕ್ಷೆಗೊಳಗಾದವರು.

ಪ್ರಕರಣದ ವಿವರ

ಝುಬೈರ್ ಮತ್ತು ಆಸಿಫ್ ಎಂಬವರಿಗೆ ಮಸೀದಿ ವಿಷಯದಲ್ಲಿ ಗಲಾಟೆ ಆಗಿತ್ತು. ಈ ಹಿನ್ನೆಲೆಯಲ್ಲಿ ದ್ವೇಷ ಹೊಂದಿದ್ದರು. 2016ರಲ್ಲಿ ರಮಝಾನ್ ಹಬ್ಬದ ಹಿಂದಿನ ದಿನ ‌ಝುಬೈರ್ ರಿಗೆ ಮುಕ್ಕಚ್ಚೇರಿಯಲ್ಲಿ ಆಸಿಫ್ ಮತ್ತು ಆತನ ಗೆಳೆಯ ಅಲ್ತಾಫ್ ಎಂಬವರು ಹೊಡೆದಿದ್ದರು. ಇವರ ವಿರುದ್ಧ ಝುಬೈರ್ ಪೊಲೀಸರಿಗೆ ದೂರು ನೀಡಿದ್ದರು.  ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಅಲ್ತಾಫ್ ವಿರುದ್ಧ ಗೂಂಡಾ ಕಾಯಿದೆ ಹಾಕಲಾಗಿತ್ತು.

ಈ ಹಿನ್ನೆಲೆಯಲ್ಲಿ ಝುಬೈರ್ ಮೇಲೆ ಅಲ್ತಾಫ್‌ಗೆ ದ್ವೇಷವಿತ್ತು. 2017ರ ಅ.4ರಂದು ಸಂಜೆ ಅಲ್ತಾಫ್, ಆಸಿಫ್ ಮತ್ತು ಸುಹೈಲ್ ಸೇರಿ ಝುಬೈರ್ ರನ್ನು ಕೊಲೆ ಮಾಡುವ ಬಗ್ಗೆ ಒಳಸಂಚು ನಡೆಸಿದ್ದರು. ಅಂದು ರಾತ್ರಿ 7.55ಕ್ಕೆ ಝುಬೈರ್ ತನ್ನ ಗೆಳೆಯ ಇಲ್ಯಾಸ್‌ ಎಂಬವರೊಂದಿಗೆ ಮಸೀದಿ ಎದುರಿನ ರಸ್ತೆಯಲ್ಲಿ ಬೈಕ್‌ನಲ್ಲಿ ಕುಳಿತು ಮಾತನಾಡುತ್ತಿದ್ದಾಗ ಸುಹೈಲ್, ನಿಝಾಮ್, ತಾಜುದ್ದೀನ್ ಮತ್ತು ಮುಸ್ತಾಫ ತಲ್ವಾರ್‌ನೊಂದಿಗೆ ಬಂದು ಝುಬೈರ್ ರನ್ನು ಕಡಿದು ಕೊಲೆ ಮಾಡಿದ್ದರು. ತಡೆಯಲು ಬಂದ ಇಲ್ಯಾಸ್‌ ಅವರ ಕೈಗೆ ಕಡಿದಿದ್ದರು.  

ಅಂದಿನ ಪೊಲೀಸ್ ನಿರೀಕ್ಷಕ ಗೋಪಿಕೃಷ್ಣ ಕೆ.ಆರ್. ಅವರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ 5ನೇ ಆರೋಪಿ ಅಲ್ತಾಫ್ ಮೃತಪಟ್ಟಿದ್ದ. ಪ್ರಮುಖ ಆರೋಪಿ ಸುಹೈಲ್ ತಲೆಮರೆಸಿಕೊಂಡಿದ್ದಾನೆ. ನಿಝಾಮುದ್ದೀನ್, ತಾಜುದ್ದೀನ್ ಮತ್ತು ಮುಸ್ತಾಫನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 20,000 ರೂ. ದಂಡ, ದಂಡದ ಹಣ ಕಟ್ಟಲು ತಪ್ಪಿದರೆ ಹೆಚ್ಚುವರಿಯಾಗಿ 4 ತಿಂಗಳು ಜೈಲು ಶಿಕ್ಷೆ ಹಾಗೂ ಐಪಿಸಿ ಕಲಂ 326ರಡಿ ಎಸಗಿದ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ ಮತ್ತು 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಒಂದು ತಿಂಗಳು ಹೆಚ್ಚುವರಿಯಾಗಿ ಜೈಲು ಶಿಕ್ಷೆ ವಿಧಿಸಿ ಹಾಗೂ ದಂಡದ ಮೊತ್ತದಲ್ಲಿ 50,000 ರೂ.ಗಳನ್ನು ಕೊಲೆಯಾದ ಝುಬೈರ್ ಅವರ ತಂದೆಗೆ ನೀಡುವಂತೆ ಹಾಗೂ ಗಾಯಾಳುವಾಗಿದ್ದ ಇಲ್ಯಾಸ್ ಅವರಿಗೆ 20,000 ನೀಡಲು ಮತ್ತು ಝುಬೈರ್ ತಂದೆಗೆ ಮತ್ತು ಗಾಯಾಳುವಿಗೆ ಸೂಕ್ತ ಪರಿಹಾರ ನೀಡಲು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಸರಕಾರದ ಪರವಾಗಿ ಸರಕಾರಿ ಅಅಭಿಯೋಜಕ ನಾರಾಯಣ ಸೇರಿಗಾರ್ ಯು. ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X