ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಲು ಅಂಬೇಡ್ಕರ್ ಕಾರಣ: ಪ್ರೊ.ಉಮೇಶ್ಚಂದ್ರ

ಉಡುಪಿ : ಡಾ.ಬಿ.ಆರ್.ಅಂಬೇಡ್ಕರ್ ಯಾವುದೇ ಬಗೆಯ ಹಿಂಸಾ ಚಾರವನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಅಹಿಂಸೆಯಲ್ಲಿ ನಂಬಿಕೆ ಹೊಂದಿದ್ದ ಅವರು ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಮುಖ್ಯ ಕಾರಣರಾದರು ಎಂದು ಮಂಗಳೂರು ವಿವಿ ಸಮೂಹ ಮಾಧ್ಯಮ ಮತ್ತು ಪತ್ರಿಕೋದ್ಯಮ ವಿಭಾಗ ಮುಖಸ್ಥ ಪ್ರೊ.ಉಮೇಶ್ಚಂದ್ರ ಎಂ.ಪಿ. ಹೇಳಿದ್ದಾರೆ.
ಉಡುಪಿ ವಕೀಲ ಸಂಘದ ಆಶ್ರಯದಲ್ಲಿ ಇಂದು ಸಂಘದ ಕಚೇರಿಯಲ್ಲಿ ನಡೆದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
೧೯೩೧ರ ಮೊದಲ ದುಂಡುಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿದ್ದ ಅಂಬೇಡ್ಕರ್ ದೇಶಕ್ಕೆ ಪೂರ್ಣ ಸ್ವಾತಂತ್ರ್ಯ ನೀಡುವಂತೆ ಬ್ರಿಟೀಷರನ್ನು ಕೋರಿ ದ್ದರು. ಪ್ರಬುದ್ಧ ಭಾರತ ನಿರ್ಮಾಣದ ಬಗ್ಗೆ ಅವರು ಆಶಾವಾದಿಯಾಗಿದ್ದರು ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಭಾವಚಿತ್ರ ಅನಾವರಣಗೊಳಿಸಿ, ಅಂಬೇಡ್ಕರ್ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಸಲ್ಲದು. ಪ್ರತಿಯೊಬ್ಬರೂ ಅವರ ಆಶಯ ಮತ್ತು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಾಮೂಹಿಕವಾಗಿ ಪ್ರಯತ್ನಿಸ ಬೇಕು ಎಂದರು.
ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ, ಮುಖ್ಯನ್ಯಾಯಿಕ ದಂಡಾಧಿಕಾರಿ ಶಕುಂತಳಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಉಪಸ್ಥಿತರಿದ್ದರು.
ವಕೀಲ ಸಂಘದ ಅಧ್ಯಕ್ಷ ಬಿ.ನಾಗರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ಮಂಜುನಾಥ ವಿ. ಅತಿಥಿಗಳನ್ನು ಪರಿಚಯಿಸಿದರು. ವಕೀಲ ರಾಜಶೇಖರ ಶಾಮರಾವ್ ಕಾರ್ಯ ಕ್ರಮ ನಿರೂಪಿಸಿದರು.







