ಮಣಿಪಾಲ: ಇಂದು ಅಪ್ರೆಂಟಿಸ್‌ಶಿಪ್ ಮೇಳ
ಉಡುಪಿ, ಎ.೨೦: ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಉಡುಪಿ ಹಾಗೂ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರಮಟ್ಟದ ಐ.ಟಿ.ಐ ಅಪ್ರೆಂಟಿಸ್‌ಶಿಪ್ ಮೇಳ-೨೦೨೨ ಕಾರ್ಯಕ್ರಮ ಎ.೨೧ರಂದು ಬೆಳಗ್ಗೆ ೧೦ ಗಂಟೆಗೆ ಮಣಿಪಾಲ ಪ್ರಗತಿನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉದ್ಘಾಟಿಸಲಿದ್ದು, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಡಿಐಸಿ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಕಾರ್ಮಿಕ ಅಧಿಕಾರಿ ಕುಮಾರ್, ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀ ಜಿಲ್ಲಾ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಂಡಾರು, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ಬಾಳಿಗಾ, ಸ.ಕೈ.ತ. ಸಂಸ್ಥೆ ಐಎಂಸಿ ಅಧ್ಯಕ್ಷ ವಿಶ್ವನಾಥ ಭಟ್, ಅಲೆವೂರು ಗ್ರಾಪಂ ಅಧ್ಯಕ್ಷೆ ಪುಷ್ಪಾ ಅಂಚನ್ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.