Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ...

ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ ನೀಡಿ: ಬಿಬಿಎಂಪಿಗೆ ಹೈಕೋರ್ಟ್ ಆದೇಶ

ವಾರ್ತಾಭಾರತಿವಾರ್ತಾಭಾರತಿ20 April 2022 11:19 PM IST
share
ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಕಾರ್ಯಾದೇಶ ನೀಡಿ: ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಬೆಂಗಳೂರು, ಎ.20: ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕಾರ್ಯಾದೇಶವನ್ನು ಮುಂದಿನ 36 ಗಂಟೆಗಳಲ್ಲಿ ನೀಡಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ಗಡುವು ನೀಡಿದೆ. 

ರಾಜಧಾನಿ ಬೆಂಗಳೂರಿನ ರಸ್ತೆಗಳ ನಿರ್ವಹಣೆ ಸಂಬಂಧ 2015ರಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ ರಸ್ತೆ ಗುಂಡಿ ಮುಚ್ಚುವ ಕಂಪೆನಿ ಪರ ವಕೀಲರು ವಾದಿಸಿ, ‘ಪಾಲಿಕೆ ಈವರೆಗೂ ನಮಗೆ ಕಾರ್ಯಾದೇಶ ನೀಡಿಲ್ಲ. ಹೀಗಾಗಿ, ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭಿಸಲು ಸಾಧ್ಯವಾಗಿಲ್ಲ. ಇನ್ನೂ ಪಾಲಿಕೆ ಜತೆ ಮಾತುಕತೆ ನಡೆದಿದೆ’ ಎಂದು ತಿಳಿಸಿದರು.

ಪಾಲಿಕೆ ಪರ ವಕೀಲರು ವಾದಿಸಿ, ಕೆಲ ವಿಚಾರಗಳಲ್ಲಿ ಲೆಕ್ಕಾಚಾರ ನಡೆಯುತ್ತಿದ್ದು, ಎಆರ್‍ಟಿಎಸ್ ಸಂಸ್ಥೆಯೇ ಎರಡು ದಿನ ಕಾಲಾವಕಾಶ ನೀಡುವಂತೆ ಬಿಬಿಎಂಪಿಗೆ ಕೋರಿದೆ. ಅದರ ಹೊರತಾಗಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಸಂಬಂಧ ಪಾಲಿಕೆ ಕಾರ್ಯಾದೇಶ ನೀಡಲು ಸಿದ್ಧವಿದೆ. ಇನ್ನೆರಡು ದಿನಗಳಲ್ಲಿ ಕಾರ್ಯಾದೇಶ ನೀಡುತ್ತೇವೆ ಎಂದು ತಿಳಿಸಿದರು. 

ಬಿಬಿಎಂಪಿ ಹೇಳಿಕೆಯನ್ನು ಎಆರ್‍ಟಿಎಸ್ ಪರ ವಕೀಲರು ಸರಾಸಗಟಾಗಿ ನಿರಾಕರಿಸಿದರು. ಕೊನೆಗೆ ಪಾಲಿಕೆ ಪರ ವಕೀಲರು, ಪ್ರಕರಣವನ್ನು ಗುರುವಾರ ವಿಚಾರಣೆಗೆ ನಿಗದಿಪಡಿಸಿದರೆ, ಕಾರ್ಯಾದೇಶ ನೀಡಿ ನ್ಯಾಯಾಲಯಕ್ಕೆ ದಾಖಲೆ ಒದಗಿಸಲಾಗುವುದು ಎಂದು ತಿಳಿಸಿದರು. ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ನಮಗೆ ಬೇರೆ ಯಾವ ವಿಚಾರವೂ ಬೇಡ. ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭವಾಗಿದೆಯೇ, ಇಲ್ಲವೇ ಎನ್ನುವುದಷ್ಟೇ ಬೇಕು. ಈಗಾಗಲೇ ಮಳೆ ಆರಂಭವಾಗಿದೆ. ಪರಿಸ್ಥಿತಿ ಮಾತ್ರ ಮೊದಲಿನಂತೆಯೇ ಇದೆ. ಮಳೆ ಆರಂಭವಾದರೆ ನಾಲ್ಕೈದು ತಿಂಗಳು ಕಾಮಗಾರಿ ಮಾಡಲಾಗದು. ಇನ್ನೇನು ಕೋರ್ಟ್ ಬೇಸಿಗೆ ರಜೆ ಆರಂಭವಾಗಲಿದ್ದು, ಕಲಾಪ ನಡೆಯುವುದಿಲ್ಲವೆಂಬುದು ನಿಮಗೂ ತಿಳಿದಿದೆ. 

ಈಗಾಗಲೇ ಸಾಕಷ್ಟು ಸಮಯ ನೀಡಿದ್ದೇವೆ. ನಿಮಗೆ ಕೆಲಸ ಆರಂಭಿಸುವ ಉದ್ದೇಶವಿಲ್ಲ. ಇದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೇ, ಮೊದಲು ಸಂಚಾರ ದಟ್ಟಣೆಯಿಂದ ರಸ್ತೆ ಗುಂಡಿ ಮುಚ್ಚಲಾಗಿಲ್ಲವೆಂದು ಹೇಳಿದಿರಿ, ಆನಂತರ ಮೂಲಸೌಕರ್ಯ ಕೊರತೆ, ಆಮೇಲೆ ಮಳೆಯ ಮೇಲೆ ಆರೋಪ ಹೊರಿಸಿದಿರಿ, ಇದೆಲ್ಲಾ ಆದ ಬಳಿಕ ರಸ್ತೆ ಅಗೆಯುವ ಇತರ ಏಜೆನ್ಸಿಗಳತ್ತ ಬೆರಳು ತೋರಿದಿರಿ. ಇದೀಗ, ರಸ್ತೆ ಗುಂಡಿ ಮುಚ್ಚಲು ಮುಂದಾಗಿರುವ ಸಂಸ್ಥೆ ಬಗ್ಗೆಯೇ ದೂರುತ್ತಿದ್ದೀರಿ. ಇದೇ ರೀತಿ ನೀವು ಆರೋಪ ಹೊರಿಸುವುದನ್ನು ಮುಂದುವರೆಸಲು ಯಾರು ಉಳಿದಿದ್ದಾರೆ. 

ಇನ್ನು ಮುಂದೆ ಯಾರ ಮೇಲೆ ನಿಮ್ಮ ಜವಾಬ್ದಾರಿಗಳನ್ನು ಹೊರಿಸುತ್ತೀರಿ ಎಂದು ಪೀಠ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತು. ಅಂತಿಮವಾಗಿ, ನೀವು ಒಂದಲ್ಲಾ ಒಂದು ಕಾರಣ ನೀಡಿ ಕೆಲಸ ಮುಂದೂಡುತ್ತಲೇ ಇದ್ದೀರಿ, ಇದು ನಿಜಕ್ಕೂ ವಿಪರೀತವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿತು. ಹಾಗೆಯೇ, ‘ನಿಮಗೆ ಇನ್ನು 36 ಗಂಟೆ ಕಾಲಾವಕಾಶ ನೀಡುತ್ತೇವೆ. ಅಷ್ಟರೊಳಗೆ ಕಾಮಗಾರಿ ಆರಂಭಿಸಲು ಕಾರ್ಯಾದೇಶ ನೀಡಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಪಾಲಿಕೆಗೆ ತಾಕೀತು ಮಾಡಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X