Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಮಿನಲ್ ವಿಚಾರಣೆಗಳ ಕುರಿತು ಟಿವಿ...

ಕ್ರಿಮಿನಲ್ ವಿಚಾರಣೆಗಳ ಕುರಿತು ಟಿವಿ ಚರ್ಚೆಗಳು ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ನೇರ ಹಸ್ತಕ್ಷೇಪ: ಸುಪ್ರೀಂ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ21 April 2022 12:13 AM IST
share
ಕ್ರಿಮಿನಲ್ ವಿಚಾರಣೆಗಳ ಕುರಿತು ಟಿವಿ ಚರ್ಚೆಗಳು ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ನೇರ ಹಸ್ತಕ್ಷೇಪ: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಎ.20: ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಅಪರಾಧ ವಿಚಾರಣೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಟಿವಿ ವಾಹಿನಿಗಳಲ್ಲಿಯ ಚರ್ಚೆಗಳು ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ನೇರ ಹಸ್ತಕ್ಷೇಪಕ್ಕೆ ಸಮನಾಗುತ್ತವೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ.

ಅಪರಾಧಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳು ಮತ್ತು ನಿರ್ದಿಷ್ಟ ವಿಷಯವು ಪ್ರಕರಣದಲ್ಲಿ ನಿರ್ಣಾಯಕ ಸಾಕ್ಷವಾಗುತ್ತದೆಯೇ ಎನ್ನುವುದು ನ್ಯಾಯಾಲಯದಿಂದ ವಿಚಾರಣೆಯಾಗಬೇಕೇ ಹೊರತು ಟಿವಿ ವಾಹಿನಿಯಿಂದಲ್ಲ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್ ಮತ್ತು ಪಿ.ಎಸ್.ನರಸಿಂಹ ಅವರ ಪೀಠವು ಹೇಳಿತು. ಮಂಗಳವಾರ ಡಕಾಯಿತಿ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿ ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ. ಅಪರಾಧಕ್ಕೆ ಕಾರಣವಾದ ಘಟನಾವಳಿಗಳನ್ನು ಸಾಬೀತುಗೊಳಿಸಲು ಪ್ರಾಸಿಕ್ಯೂಷನ್ ವಿಫಲಗೊಂಡಿತ್ತು.
1999,ಅ.28ರಂದು ಬೆಂಗಳೂರಿನಲ್ಲಿ ವೃದ್ಧೆಯೋರ್ವರನ್ನು ಹತ್ಯೆ ಮಾಡಿ ಅವರ ಚಿನ್ನಾಭರಣಗಳನ್ನು ದೋಚಲಾಗಿತ್ತು. ವಿಚಾರಣಾ ನ್ಯಾಯಾಲಯವು ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸಿದ್ದರೆ, ಬಳಿಕ ಕರ್ನಾಟಕ ಉಚ್ಚ ನ್ಯಾಯಾಲಯವು ಅದನ್ನು ಜೀವಾವಧಿ ಶಿಕ್ಷೆಗೆ ತಗ್ಗಿಸಿತ್ತು.

 ಪ್ರಕರಣದಲ್ಲಿಯ ‘ಆತಂಕಕಾರಿ ಅಂಶಗಳನ್ನು ’ ಗಮನಿಸಿದ ಸರ್ವೋಚ್ಚ ನ್ಯಾಯಾಲಯದ ಪೀಠವು.ತನಿಖಾಧಿಯೆದುರು ನಿಡಲಾಗಿದ್ದ ತಪ್ಪೊಪ್ಪಿಗೆ ಹೇಳಿಕೆಯನ್ನು ಒಳಗೊಂಡಿದ್ದ ಡಿವಿಡಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಕೇಳಿಸಲಾಗಿತ್ತು ಮತ್ತು ಅದರ ಆಧಾರದಲ್ಲಿ ತೀರ್ಪು ಹೊರಬಿದ್ದಿತ್ತು. ತನಿಖಾಧಿಕಾರಿ ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದು ಭಾರತೀಯ ಸಾಕ್ಷ ಕಾಯ್ದೆಯ ಉಲ್ಲಂಘನೆಯಾಗಿದೆ. ಕಾಯ್ದೆಯ ಕಲಂ 26ರಂತೆ ಮ್ಯಾಜಿಸ್ಟ್ರೇಟ್ ಬದಲು ಪೊಲೀಸ್ ಅಧಿಕಾರಿಯ ಎದುರು ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ನ್ಯಾಯಾಲಯವು ಪರಿಗಣಿಸುವಂತಿಲ್ಲ ಎಂದು ಹೇಳಿತು.

ಇದೇ ಡಿವಿಡಿಯನ್ನು ಕನ್ನಡದ ಉದಯ ವಾಹಿನಿಯು ಕಾರ್ಯಕ್ರಮವೊಂದರಲ್ಲಿ ಪ್ರಸಾರಿಸಿತ್ತು. ಡಿವಿಡಿಯನ್ನು ಖಾಸಗಿ ಟಿವಿ ವಾಹಿನಿಗೆ ಲಭ್ಯವಾಗಿಸಿದ್ದು ಮತ್ತು ಅದು ಪ್ರಸಾರಗೊಳ್ಳುವಂತೆ ಮಾಡಿದ್ದು ಕರ್ತವ್ಯಲೋಪ ಮತ್ತು ನ್ಯಾಯದ ಆಡಳಿತದಲ್ಲಿ ನೇರ ಹಸ್ತಕ್ಷೇಪವಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X